ಮತದಾನ ಜಾಗೃತಿ : ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

 ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ, ನೈತಿಕವಾಗಿ ಕಡ್ಡಾಯ ಮತದಾನ ಮಾಡುತ್ತೇವೆ ಎಂಬುದಾಗಿ ಕೊಪ್ಪಳದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಏರ್ಪಡಿಸಲಾಗಿದ್ದ ಮತದಾರರ ಜಾಗೃತಿ ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯಾರ್ತಿನಿಯರು ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.  ಜಿಲ್ಲಾ ಸಮಾಜ ಕಲ್ಯಾಣಾದಿಕಾರಿ ಶುಭಾ ಸೇರಿದಂತೆ ವಸತಿ ನಿಲಯದ ಸಿಬ್ಬಂದಿಗಳು, ವಿದ್ಯಾರ್ಥಿನಿಯರು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Leave a Reply