ಗಂಗಾವತಿ- ’ಬನಾಯೇಂಗೆ ಮಂದಿರ್’ ಹಾಡು ನಿಷೇಧ

  ಜಿಲ್ಲೆಯ ಗಂಗಾವತಿ ನಗರದಲ್ಲಿ ಹೋಳಿ ಹಬ್ಬ ಆಚರಣೆ ನಿಮಿತ್ಯ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಮಾ. ೧೭ ರಂದು ’ಬನಾಯೇಂಗೆ ಮಂದಿರ್’ ಎಂಬ ಹಾಡನ್ನು ಸಾರ್ವಜನಿಕವಾಗಿ ಹಾಡದಂತೆ ಮತ್ತು ಆಡಿಯೋ ರೂಪದಲ್ಲಿ ಬಿತ್ತರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಆದೇಶ ಹೊರಡಿಸಿದ್ದಾರೆ.
  ಗಂಗಾವತಿ ನಗರದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಾ. ೧೭ ರಂದು ಬೆಳಿಗ್ಗೆ ೯ ಗಂಟೆಯಿಂದ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಜರುಗಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಪ್ರಾರ್ಥನಾ ಮಂದಿರಗಳ ಬಳಿ ’ಬನಾಯೇಂಗೆ ಮಂದಿರ್’ ಎಂಬ ಹಾಡನ್ನು ಮೇಲಿಂದ ಮೇಲೆ ಹಾಕಿ, ಕೋಮು ಸೌಹಾರ್ದತೆಗೆ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಆಗುವ ಸಾಧ್ಯತೆ ಇರುವುದರಿಂದ ಈ ಹಾಡನ್ನು ಅಂದು ಸಾರ್ವಜನಿಕವಾಗಿ ಹಾಡದಂತೆ ಮತ್ತು ಆಡಿಯೋ ರೂಪದಲ್ಲಿ ಬಿತ್ತರಿಸುವುದನ್ನು ನಿಷೇಧಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾಧಿಕಾರಿಗಳಗೆ ಕೋರಿದ್ದರು.  ಈ ಅಂಶಗಳನ್ನು ಪರಿಗಣಿಸಿ, ಗಂಗಾವತಿ ನಗರದಲ್ಲಿ ಹೋಳಿ ಹಬ್ಬ ಆಚರಣೆ ಸಂದರ್ಭದಲ್ಲಿ ಶಾಂತಿ ಪಾಲನೆ ಹಾಗೂ ಕೋಮು ಸೌಹಾರ್ದತೆ ಕಾಪಾಡುವ ದೃಷ್ಟಿಯಿಂದ, ಗಂಗಾವತಿ ನಗರದಾದ್ಯಂತ ಮಾ. ೧೭ ರಂದು ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ’ಬನಾಯೇಂಗೆ ಮಂದಿರ್’ ಎಂಬ ಹಾಡನ್ನು ಸಾರ್ವಜನಿಕವಾಗಿ ಹಾಡದಂತೆ ಮತ್ತು ಆಡಿಯೋ ರೂಪದಲ್ಲಿ ಬಿತ್ತರಿಸುವುದನ್ನು ನಿಷೇಧಿಸಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply