ಕೊಪ್ಪಳ ಜಿಲ್ಲಾಧಿಕಾರಿಯಾಗಿ ಎಂ. ತುಳಸಿ ಅಧಿಕಾರ ಸ್ವೀಕಾರ

ಕೊಪ್ಪಳ ಮೇ. ೧೬ (ಕ.ವಾ) : ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ತುಳಸಿ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ಕೆ.ಎಸ್. ಸತ್ಯಮೂರ್ತಿ ಅವರು ಕಬ್ಬು ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ವರ್ಗಾವಣೆಗೊಂಡ ಕಾರಣ, ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಎಂ. ತುಳಸಿ ಅವರು ಇಂದು ಅಧಿಕಾರ ವಹಿಸಿಕೊಂಡರು. ಎಂ. ತುಳಸಿ ಅವರು ಈ ಹಿಂದೆ ತುಮಕೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
Please follow and like us:
error