You are here
Home > Koppal News > ಗಣರಾಜ್ಯೋತ್ಸವ: ಜ. ೨೩ ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯ್ಕೆ

ಗಣರಾಜ್ಯೋತ್ಸವ: ಜ. ೨೩ ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯ್ಕೆ

 ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯ್ಕೆ ಕಾರ್ಯಕ್ರಮ ಜ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
  ಗಣರಾಜ್ಯೋತ್ಸವದ ದಿನದಂದು ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯ್ಕೆಗಾಗಿ ಸಾಂಸ್ಕೃತಿಕ ಸಮಿತಿಯು ಜ. ೨೩ ರಂದು ಬೆಳಿಗ್ಗೆ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ತಂಡಗಳ ಆಯ್ಕೆ ಮಾಡಲಿದೆ.  ನಗರದ ಕಿರಿಯ/ಹಿರಿಯ/ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳ ತಂಡಗಳು ಭಾಗವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ

Leave a Reply

Top