You are here
Home > Koppal News > ಡಿ.೨೮ ರಂದು ನೂತನ ಪಿಂಚಣಿ ಪದ್ದತಿ ಮಾಹಿತಿ ಕಾರ್ಯಾಗಾರ

ಡಿ.೨೮ ರಂದು ನೂತನ ಪಿಂಚಣಿ ಪದ್ದತಿ ಮಾಹಿತಿ ಕಾರ್ಯಾಗಾರ

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಖಜಾನೆ ನೌಕರರ ಸಂಘ ಬೆಂಗಳೂರು ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಡಿ.೨೮ ರಂದು ಬೆಳಿಗ್ಗೆ ೧೦.೩೦ ಕ್ಕೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ನೂತನ ಪಿಂಚಣಿ ಯೋಜನೆ ಪದ್ದತಿ ಕಾರ್ಯಾಗಾರದ ಉದ್ಘಾಟನೆ ಸಮಾರಂಭ ಜರುಗಲಿದೆ.
 ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಆರ್.ಜುಮ್ಮಣ್ಣನವರ ವಹಿಸುವರು.  ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಡಾ|| ಸುರೇಶ ಬಿ.ಇಟ್ನಾಳ, ಜಿ.ಪಂ. ಉಪಕಾರ್ಯದರ್ಶಿ ರವಿ ಬಸರಿಹಳ್ಳಿ, ರಾಜ್ಯ ಖಜಾನೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ನಾರಾಯಣ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭು ಕಿಡದಾಳ, ಗದಗ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪ್ರೇಮನಾಥ ಗರಗ, ದಾವಣಗೇರ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ನೀಲಗಿರಿಯಪ್ಪ ಅವರು ಆಗಮಿಸಲಿದ್ದಾರೆ. ಅತಿಥಿ ಉಪನ್ಯಾಸಕರಾಗಿ ನೌಕರ ಬಂಧು ಮಾಸ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕರು ಹಾಗೂ ನಿವೃತ್ತ ಜಿಲ್ಲಾ ಖಜಾನೆ ಅಧಿಕಾರಿ ಆರ್.ಸುಂದರ್ ರಾಜ್, ನೌಕರ ಬಂಧು ಮಾಸ ಪತ್ರಿಕೆ ಸಂಪಾದಕ ಎಂ.ಬಿ.ಪೂಜಾರ್  ಭಾಗವಹಿಸುವರು.

Leave a Reply

Top