ಏ. ೧೪ ರಂದು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಉದ್ಘಾಟನೆ ಸಮಾರಂಭ

  ರಾಯಚೂರು ಕೃಷಿ ವಿಶ್ವವಿದ್ಯಾಲಯ ವತಿಯಿಂದ ಕೊಪ್ಪಳದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ನೂತನ ಕಟ್ಟಡ ಮತ್ತು ರೈತರ ತರಬೇತಿ ನಿಲಯದ ಉದ್ಘಾಟನಾ ಸಮಾರಂಭ ಹಾಗೂ ಡಾ|| ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಏ. ೧೪ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತ ಆವರಣದಲ್ಲಿ ನಡೆಯಲಿದೆ.
  ನೂತನ ಕಟ್ಟಡದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ಅಮರೇಶ್ ಕುಳಗಿ, ಸಂಸದ ಸಂಗಣ್ಣ ಕರಡಿ,  ಶಾಸಕರುಗಳಾದ ಬಸವರಾಜ ರಾಯರಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ, ಅಮನಾಥ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ್ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್ ಅವರು ಭಾಗವಹಿಸುವರು.  ಈಲ್ಲಾಧಿಕಾರಿ ಆರ್.ಆರ್. ಜನ್ನು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಪಿ. ರಾಜಾ ಸೇರಿದಂತೆ ರಾಯಚೂರು ಕೃಷಿ ವಿವಿ ಹಿರಿಯ ಅಧಿಕಾರಿಗಳು ಅತಿಥಿಗಳಾಗಿ ಪಾಲ್ಗೊಳ್ಳುವರು.
  ಈ ಸಂದರ್ಭದಲ್ಲಿ ಕೃಷಿಯ ಕೆಲವು ಮಾದರಿ ತಾಕುಗಳ ಪ್ರದರ್ಶನ ಹಾಗೂ ಮಣ್ಣಿನ ಆರೋಗ್ಯ ಕಾರ್ಡ್‌ಗಳ ವಿತರಣೆಯನ್ನು ಆಯೋಜಿಸಲಾಗಿದೆ.  ಜಿಲ್ಲೆಯ ಎಲ್ಲ ರೈತ ಬಾಂಧವರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗಪಡೆದು, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೇಂದ್ರದ ವಿಸ್ತರಣಾ ಮುಂದಾಳು ವಿ. ಆರ್. ಜೋಷಿ ರವರು ಮನವಿ ಮಾಡಿದ್ದಾರೆ.

Related posts

Leave a Comment