fbpx

ನ.೧೦ ರಂದು ಕೊಪ್ಪಳದಲ್ಲಿ ಟಿಪ್ಪು ಸುಲ್ತಾನ ಜಯಂತಿ.

ಕೊಪ್ಪಳ, ನ.೦೭ (ಕ ವಾ) ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ ಜಯಂತಿ ಕಾರ್ಯಕ್ರಮವನ್ನು ನ.೧೦ ರಂದು ಬೆಳಿಗ್ಗೆ ೧೧.೩೦ ಗಂಟೆಗೆ  ಕೊಪ್ಪಳ ನಗರದ  ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.       
     ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು ಚಂದುಸಾಬ್, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.  ಕೊಪ್ಪಳ ಯೂಸೂಫಿಯಾ ಮಸ್ಜಿದ್‌ನ ಮೌಲಾನಾ ಮುಫ್ತಿ ಮಹಮ್ಮದ್ ನಜೀರ್ ಅಹ್ಮದ್ ಅವರು ಗೌರವ ಉಪಸ್ಥಿತಿ ವಹಿಸಲಿದ್ದು, ಮರಿಯಮ್ಮನಹಳ್ಳಿಯ ಸ್ಮಯೋರ ವ್ಯಾಸಪುರಿ ಕಾಲೇಜಿನ ಕನ್ನಡ ಅಧ್ಯಾಪಕರು ಹಾಗೂ ಪ್ರಗತಿಪರ ಚಿಂತಕರಾದ ಪ್ರೊ|| ಚಂದ್ರಶೇಖರ್.ಎಸ್.ಬಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
       ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಿಗ್ಗೆ ೦೯ ಗಂಟೆಗೆ ನಗರದ ಶ್ರೀ ಸಿರಸಪ್ಪಯ್ಯನಮಠದ ಹತ್ತಿರವಿರುವ ನೂರಾನಿ ಮಸೀದಿಯಿಂದ ಜವಾಹರ ರಸ್ತೆಯ ಮೂಲಕ ಸಾಹಿತ್ಯ ಭವನದವರೆಗೆ ಹಜರತ್ ಟಿಪ್ಪು ಸುಲ್ತಾನರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಕಲ್ಲೇಶ ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!