ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಿಮ್ಮನೆ ರತ್ನಾಕರರಿಗೆ ಸನ್ಮಾನ

ಕೊಪ್ಪಳ ೨೫: ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಲಯಕ್ಕೆ ಬೆಳಿಗ್ಗೆ ೯.೦೦ ಗಂಟೆಗೆ ಭೇಟಿ ನೀಡಿದ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವರಾದ   ಕಿಮ್ಮನೆ ರತ್ನಾಕರ ಇವರಿಗೆ ಕೊಪ್ಪಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿರವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕೆ,ಬಸವರಾಜ ಹಿಟ್ನಾಳ, ಶಾಸಕರಾದ ಬಸವರಾಜ ರಾಯರೆಡ್ಡಿ, ಕೆ.ರಾಘವೇಂದ್ರ ಹಿಟ್ನಾಳ, ಜಿ.ಪಂ. ಅಧ್ಯಕ್ಷರಾದ ಟಿ.ಜನಾರ್ಧನ್, ಕೆ.ಪಿ.ಸಿ.ಸಿ. ಸದಸ್ಯರಾದ ಜುಲ್ಲು ಖಾದ್ರಿ,
 ನಗರಸಭಾ ಅಧ್ಯಕ್ಷರಾದ ಶ್ರೀಮತಿ ಲತಾ ಬಿ. ಸಂಡೂರು, ಉಪಾಧ್ಯಕ್ಷರಾದ ಅಮ್ಜದ್ ಪಟೇಲ್, ಹೆಚ್.ಎಲ್.ಹಿರೇಗೌಡ್ರು, ಜಿಲ್ಲಾ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ ಇನ್ನು ಅನೇಕ ಪಕ್ಷದ ಧುರೀಣರು ನಗರಸಭಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Please follow and like us:
error