You are here
Home > Koppal News > ನ.೨೦ ರಂದು ಕೈಗಾರಿಕಾ ತರಬೇತಿ ಸಂಸ್ಥೆಯ ಅಡಿಗಲ್ಲು ಸಮಾರಂಭ

ನ.೨೦ ರಂದು ಕೈಗಾರಿಕಾ ತರಬೇತಿ ಸಂಸ್ಥೆಯ ಅಡಿಗಲ್ಲು ಸಮಾರಂಭ

  ಜಿಲ್ಲಾಡಳಿತ, ಗೃಹ ಮಂಡಳಿ ಹಾಗೂ ಉದ್ಯೋಗ ಮತ್ತು ತರಬೇತಿ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಅಡಿಗಲ್ಲು ಸಮಾರಂಭ ನ.೨೦ ರಂದು ಬೆಳಿಗ್ಗೆ ೧೦ ಗಂಟೆಗೆ ಟಣಕನಕಲ್ ಗ್ರಾಮದಲ್ಲಿ ಜರುಗಲಿದೆ. 
ಉದ್ಘಾಟನೆಯನ್ನು ಕಾರ್ಮಿಕ ಸಚಿವರಾದ ಪಿ.ಟಿ.ಪರಮೇಶ್ವರ ನಾಯ್ಕ ಅವರು ನೆರವೇರಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಣ್ಣ ನೀರಾವರಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ, ಜಿ.ಪಂ.ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ್, ನಗರಸಭೆ ಅಧ್ಯಕ್ಷೆ ಲತಾ ಸಂಡೂರು, ತಾ.ಪಂ.ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್, ಓಜನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಶಾಂತಮ್ಮ ವಾಲ್ಮೀಕಿ ಅವರು ಭಾಗವಹಿಸುವರು ಎಂದು ಜಿಲ್ಲಾಧಿಕಾರಿ ಆರ್.ಆರ್.ಜನ್ನು ತಿಳಿಸಿದ್ದಾರೆ.

Leave a Reply

Top