ಅಂಗವಿಕಲರ ದಿನಾಚರಣೆ ಪ್ರಯುಕ್ತ ಡಿ.೦೮ ರಂದು ಕಾನೂನು ಅರಿವು ನೆರವು ಕಾರ್ಯಕ್ರಮ

 ಕುಷ್ಟಗಿಯ ಸರಕಾರಿ ಪದವಿ ಪೂರ್ವ ಕಾಲೇಜ ಆವರಣದಲ್ಲಿ ಡಿ.೦೮ ರಂದು ಅಂಗವಿಕಲರ ದಿನಾಚರಣೆ ಪ್ರಯುಕ್ತ ಕುಷ್ಟಗಿ ತಾಲೂಕ ಮಾಜಿ ದೇವದಾಸಿ ಮಹಿಳೆಯರಿಗೆ ಹಾಗೂ ಅಂಗವಿಕಲರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. 
ಕುಷ್ಟಗಿ ತಾಲೂಕ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ದೇವದಾಸಿ ಪುನರ್ವಸತಿ ಯೋಜನೆ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕುಷ್ಟಗಿ ತಾಲೂಕ ಮಾಜಿ ದೇವದಾಸಿ ಮಹಿಳೆಯರು ಹಾಗೂ ಅಂಗವಿಕಲರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಯಶಸ್ವಿಗೊಳಿಸಬೇಕೆಂದು ದೇವದಾಸಿ ಪುನರ್ವಸತಿ ಯೋಜನೆಯ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

Leave a Reply