ನ. ೦೮ ರಂದು ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮ

ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮ ನ. ೦೮ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆಯಲಿದೆ.

  ಕನಕದಾಸರ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಸಿರಸಪ್ಪಯ್ಯನ ಮಠ ಆವರಣದಿಂದ ಭಕ್ತ ಕನಕದಾಸರ ಭಾವಚಿತ್ರದ ಮೆರವಣಿಗೆ ಪ್ರಾರಂಭವಾಗಲಿದ್ದು, ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತ ಮೂಲಕ ಸಾಹಿತ್ಯ ಭವನ ತಲುಪಲಿದೆ.  ಮೆರವಣಿಗೆಗೆ ಡೊಳ್ಳು ಕುಣಿತ ಸೇರಿದಂತೆ ಹಲವು ಸಾಂಸ್ಕೃತಿಕ ಕಲಾ ತಂಡಗಳು ರಂಗು ತುಂಬಲಿವೆ.  ಮಧ್ಯಾಹ್ನ ೧೨ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಸಮಾರಂಭದ ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ, ಅಮರನಾಥ ಪಾಟೀಲ್, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ, ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ. ಪವಾರ್ ಮುಂತಾದ ಗಣ್ಯರು ಪಾಲ್ಗೊಳ್ಳುವರು.  ಬಳ್ಳಾರಿ ಜಿಲ್ಲೆಯ ಸಾಹಿತಿ ಡಾ. ಲಿಂಗದಳ್ಳಿ ಹಾಲಪ್ಪ ಅವರು ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ ಅವರು ತಿಳಿಸಿದ್ದಾರೆ.

Related posts

Leave a Comment