ಜಿಲ್ಲಾ ಆಸ್ಪತ್ರೆಯ ಕಟ್ಟಡದ ಉದ್ಘಾಟನಾ ಸಮಾರಂಭ

  ಕೊಪ್ಪಳ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ೨೫೦ ಹಾಸಿಗೆಗಳ ಜಿಲ್ಲಾ ಆಸ್ಪತ್ರೆ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.೧೯ ರಂದು ಬೆಳಿಗ್ಗೆ ೧೧ ಗಂಟೆಗೆ ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡದ ಪ್ರಾಂಗಣದಲ್ಲಿ ನಡೆಯಲಿದೆ.  
ಸಮಾರಂಭದ ದಿವ್ಯ ಸಾನಿಧ್ಯವನ್ನು ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ.  ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಅವರು ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ನೆರವೇರಿಸುವರು. ಒಳರೋಗಿಗಳ ವಿಭಾಗದ ಉದ್ಘಾಟನೆಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅವರು ನೆರವೇರಿಸುವರು. ಸಿಬ್ಬಂದಿಗಳ ವಸತಿ ಗೃಹ ಸಮುಚ್ಛಯ ಉದ್ಘಾಟನೆಯನ್ನು ರಾಜ್ಯ ವಸತಿ ಸಚಿವ ವಿ.ಸೋಮಣ್ಣ ಅವರು ನೆರವೇರಿಸುವರು. ಜಿಲ್ಲಾ ಔಷಧಿ ಉಗ್ರಾಣದ ಉದ್ಘಾಟನೆಯನ್ನು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಎ.ನಾರಾಯಣಸ್ವಾಮಿ ಅವರು ನೆರವೇರಿಸುವರು. ಶಸ್ತ್ರ ಚಿಕಿತ್ಸಾ ವಿಭಾಗದ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಸಂಸದಿಯ ಕಾರ್ಯದರ್ಶಿ ಹಾಗೂ ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. 
 ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಸಂಸದ ಶಿವರಾಮೇಗೌಡ, ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಪರಣ್ಣ ಮುನವಳ್ಳಿ, ಶಿವರಾಜ ತಂಗಡಗಿ, ಈಶಣ್ಣ ಗುಳಗಣ್ಣನವರ, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶಶೀಲ್ ಜಿ.ನಮೋಶಿ, ಅಮರನಾಥ ಪಾಟೀಲ್, ಹೈ-ಕ. ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಮಹಾಂತಗೌಡ ಪಾಟೀಲ್, ಡಾ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ತ್ರಿವಿಕ್ರಮ ಜೋಶಿ, ಕಾಡಾ ಅಧ್ಯಕ್ಷ ಎಚ್. ಗಿರೇಗೌಡ, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ. ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ನಗರಾಭಿವೃದ್ದಿ ಪ್ರಾಧಿಕಾರದ ಅದ್ಯಕ್ಷ ಅಪ್ಪಣ್ಣ ಪದಕಿ, ತಾ.ಪಂ.ಉಪಾಧ್ಯಕ್ಷೆ ಸುಜಾತಾ ಮಾಲಿ ಪಾಟೀಲ್, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶಪ್ಪ ಕಂತೆಪ್ಪ ಕುಳಗಿ ಮುಂತಾದ ಗಣ್ಯಾತಿಗಣ್ಯರು ಭಾಗವಹಿಸುವರು.
Please follow and like us:
error