You are here
Home > Koppal News > ಅ.೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ

ಅ.೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ

  ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕೊಪ್ಪಳ ನಗರದ ಜಿಲ್ಲಾ ಪೊಲೀಸ್ ಕಾರ್ಯಾಲಯದ ಆವರಣದಲ್ಲಿ ಅ.೨೧ ರಂದು ಬೆಳಿಗ್ಗೆ ೮.೦೦ ಗಂಟೆಗೆ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ ಅವರು ಭಾಗವಹಿಸಲಿದ್ದು, ಅವರು ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ ಅವರು ತಿಳಿಸಿದ್ದಾರೆ.

Leave a Reply

Top