ಮಹಿಳಾ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟ ನಡೆಸಬೇಕಿದೆ -ಕವಿತಾ ಈಶ್ವರ ಸಿಂಗ್

ಹೊಸಪೇಟೆ: ಮಹಿಳಾ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅದಕ್ಕಾಗಿ ಸಂಘಟಿತ ಹೋರಾಟ ನಡೆಸಬೇಕಿದೆ ಎಂದು ತಾಯಮ್ಮ ಶಕ್ತಿ ಸಂಘದ ಅಧ್ಯಕ್ಷೆ ಕವಿತಾ ಈಶ್ವರ ಸಿಂಗ್ ಹೇಳಿದರು.
ನಗರದಲ್ಲಿ ಭಾನುವಾರ ತಾಲೂಕು ಗೃಹರಕ್ಷಕದಳದ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರಲ್ಲಿ ಜಾಗೃತಿ ಮೂಡಬೇಕೆಂದರು.
ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಹೆಚ್.ಶ್ರೀನಿವಾಸರಾವ್ ಮಾತನಾಡಿ, ಮಹಿಳೆಯರು ಸಾಕ್ಷಕರಾಗುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಬೇಕೆಂದರು. ಕಟಗಿ ರಾಮಕೃಷ್ಣ ಮಾತನಾಡಿ, ಮಹಿಳೆಯರ ಸಮಸ್ಯೆಗಳು ಸಾಕಷ್ಟಿದ್ದು, ಅವುಗಳ ನಿವಾರಣೆಗೆ ಯತ್ನಿಸಲು ಎಲ್ಲರೂ ಪ್ರಯತ್ನಿಸಬೇಕೆಂದರು. 
Please follow and like us:
error

Related posts

Leave a Comment