ಕೊಪ್ಪಳ ಜಿ.ಪಂ. ಸಿಇಓ ಆಗಿ ಕೃಷ್ಣ ಬಿ ಉದಪುಡಿ ಅಧಿಕಾರ ಸ್ವೀಕಾರ

 ಕೊಪ್ಪಳ ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೃಷ್ಣ ಬಿ ಉದಪುಡಿ ಅವರು ಗುರುವಾರ ಅಧಿಕಾರ ವಹಿಸಿಕೊಂಡರು.
  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸರ್ಕಾರ ಐಎಫ್‌ಎಸ್ ಅಧಿಕಾರಿ ಕೃಷ್ಣ ಬಿ ಉದಪುಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.  ಸಿಇಓ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಕೃಷ್ಣ ಉದಪುಡಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.  ಐಎಫ್‌ಎಸ್ ಅಧಿಕಾರಿ ಕೃಷ್ಣ ಬಿ ಉದಪುಡಿ ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಮೀಸಲು ಅರಣ್ಯ ಇಲಾಖೆಯಲ್ಲಿ ಸಿ.ಎಫ್ ಮತ್ತು ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.  ಕೃಷ್ಣ ಉದಪುಡಿ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ದಾಂಡೇಲಿಯ ಅರಣ್ಯ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ, ಗದಗ, ಬಾಗಲಕೋಟೆ, ಬೆಳಗಾವಿ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.
  ಸರ್ಕಾರ ಹಲವಾರು ಅಭಿವೃದ್ಧಿ ಯೋಜನೆಗಳು ಜಿಲ್ಲಾ ಪಂಚಾಯತಿ ಮೂಲಕ ಅನುಷ್ಠಾನಗೊಳ್ಳುವುದರಿಂದ, ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿ.ಪಂ. ನೂತನ ಸಿಇಓ ಕೃಷ್ಣ ಬಿ ಉದಪುಡಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

Related posts

Leave a Comment