ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಸಂಗಣ್ಣ ಕರಡಿ ಚಾಲನೆ

  ಮೊದಲನೇಯ ಸುತ್ತಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಮಗುವಿಗೆ ಎರಡು ಹನಿ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. 
      ನಗರದ ಜಿಲ್ಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಶಾಸಕ ಸಂಗಣ್ಣ ಕರಡಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ಮಕ್ಕಳ ಆರೋಗ್ಯವನ್ನು ಕಾಪಾಡಿಕೊಂಡು ಬರುವುದು ಎಲ್ಲ ಪಾಲಕರು, ಪೋಷಕರ ಜವಾಬ್ದಾರಿಯಾಗಿದ್ದು, ೫ ವರ್ಷದೊಳಗಿನ ಯಾವುದೇ ಮಗು ಪಲ್ಸ್ ಪೋಲಿಯೋ ಹನಿಯಿಂದ ವಂಚಿತವಾಗಬಾರದು.  ಈ ಹಿಂದೆ ಎಷ್ಟೇ ಬಾರಿ ಹಾಕಿಸಿದ್ದರೂ, ಸಹ ಈಗ ಪುನಃ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು.  ಈ ಮೂಲಕ ದೇಶವನ್ನು ಪೋಲಿಯೋ ಮುಕ್ತ ದೇಶವಾಗಿಸಲು ಸಾರ್ವಜನಿಕರು ಸಹಕರಿಸಬೇಕು.  ಈ ಕಾರ್ಯಕ್ರಮದ ಯಶಸ್ವಿಗೆ ಆರೋಗ್ಯ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಕೈಜೋಡಿಸಿದ್ದು, ವಿವಿಧ ಸಂಘ ಸಂಸ್ಥೆಗಳೂ ಸಹ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹದೇವಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಬಿ.ಎಸ್. ಲೋಕೇಶ್, ನೋಡಲ್ ಅಧಿಕಾರಿ ಡಾ. ಪರಿಮಳ, ವೈದ್ಯರುಗಳಾದ ಡಾ. ದಾನರೆಡ್ಡಿ, ಡಾ. ಲಕ್ಷ್ಮೀನಾರಾಯಣ ಮುಂತಾದವರು ಉಪಸ್ಥಿತರಿದ್ದರು.
Please follow and like us:
error