ಟ್ರ್ಯಾಕ್ಟರ್‌ ಪಲ್ಟಿ: ಮೂವರ ಸಾವು

ವಿಜಯಾಪುರ, ಫೆ  ಟ್ರ್ಯಾಕ್ಟರ್‌ವೊಂದು ಪಲ್ಟಿ ಹೊಡೆದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಾಳಿಕೋಟೆ ಬಳಿಯ ನಾಗೂರಿನಲ್ಲಿ ಸಂಭವಿಸಿದೆ. 
ಮೃತರನ್ನು ಉಳವವ್ವ ಬಿರಾದಾರ್(30), ನಾಯ್ಕೋಡಿ(40) ಹಾಗೂ ದಾನವ್ವ ಹಡಪದ್(27) ಎಂದು ಗುರುತಿಸಲಾಗಿದೆ. ಈ ವೇಳೆ ಟ್ರ್ಯಾಕ್ಟರ್‌ನಲ್ಲಿದ್ದ ಇತರ 8 ಮಂದಿ ಗಂಭೀರ ಗಾಯಗೊಂಡಿದ್ದು, ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಗೆ ಟ್ರ‍್ಯಾಕ್ಟರ್‌ ಚಾಲಕನ ಬೇಜವಾಬ್ದಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣಾ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. 
Please follow and like us:
error