You are here
Home > Koppal News > ಸಂವಿಧಾನ ದಿನ ಭ್ರಾತೃಭಾವನೆ ವೃದ್ಧಿಗೆ ಸಂಕಲ್ಪ- ಪ್ರತಿಜ್ಞಾ ವಿಧಿ ಸ್ವೀಕಾರ.

ಸಂವಿಧಾನ ದಿನ ಭ್ರಾತೃಭಾವನೆ ವೃದ್ಧಿಗೆ ಸಂಕಲ್ಪ- ಪ್ರತಿಜ್ಞಾ ವಿಧಿ ಸ್ವೀಕಾರ.

ಕೊಪ್ಪಳ
ನ. ೨೬ (ಕ ವಾ) ಸರ್ಕಾರದ ಸೂಚನೆ ಮೇರೆಗೆ ನ. ೨೬ ರ ದಿನವನ್ನು ಸಂವಿಧಾನ ದಿನವನ್ನಾಗಿ
ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು
ಸಂವಿಧಾನದ ಪ್ರಸ್ತಾವನೆ ಸಾಲುಗಳಲ್ಲಿರುವ ಪ್ರತಿಜ್ಞಾ ವಿಧಿಯನ್ನು ಅಧಿಕಾರಿ,
ಸಿಬ್ಬಂದಿಗಳಿಗೆ ಬೋಧಿಸಿದರು.
     ಸಂವಿಧಾನದ ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ
ಪ್ರತಿಜ್ಞಾ ವಿಧಿ ಬೋಧಿಸಿದ ಜಿಲ್ಲಾಧಿಕಾರಿಗಳು, ಭಾರತದ ಜನಗಳಾದ ನಾವು ಭಾರತವನ್ನು ಒಂದು
ಸಾರ್ವಭೌಮ ಸಮಾಜವಾದೀ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು
ಮತ್ತು ಅದರ ಸಮಸ್ತ ನಾಗರಿಕರಿಗೆ ; ಸಾಮಾಜಿಕ, ಆರ್ಥಿಕ, ವಿಶ್ವಾಸ, ಧರ್ಮಶ್ರದ್ಧೆ ಮತ್ತು
ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು
ವ್ಯಕ್ತಿ ಗೌರವವನ್ನು, ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ,
ಅವರಲ್ಲಿ ಭ್ರಾತೃ ಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ ;
ನಮ್ಮ ಸಂವಿಧಾನ ಸಭೆಯಲ್ಲಿ ೧೯೪೯ ರ ನವೆಂಬರ್ ೨೬ ರಂದು ಈ ಮೂಲಕ ಈ ಸಂವಿಧಾನವನ್ನು
ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ ಎಂದು ಬೋಧಿಸಿದರು.  ಅಪರ
ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಡಿಡಿಪಿಐ ಶ್ಯಾಮಸುಂದರ್, ಜಿಲ್ಲಾ
ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ್,
ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಾರದಾ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ
ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ
ಸ್ವೀಕರಿಸಿದರು.
     ಸಂವಿಧಾನ ದಿನದ ಅಂಗವಾಗಿ ಜಿಲ್ಲಾಪಂಚಾಯತಿ ಕಚೇರಿಯಲ್ಲಿ
ಉಪಕಾರ್ಯದರ್ಶಿ ಎನ್.ಕೆ. ತೊರವಿ ಅವರು ಅಧಿಕಾರಿ, ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿ
ಬೋಧಿಸಿದರು.

Leave a Reply

Top