fbpx

ಸಂಖ್ಯಾಶಾಸ್ತ್ರಜ್ಞರ ಜನ್ಮ ದಿನಾಚರಣೆ : ಜೂ. ೨೭ ರಂದು ಪ್ರಬಂಧ ಸ್ಪರ್ಧೆ

: ಖ್ಯಾತ ಸಂಖ್ಯಾಶಾಸ್ತ್ರಜ್ಞ ಪ್ರೊ. ಪ್ರಶಾಂತ ಚಂದ್ರ ಮಹಾಲನೋಬಿಸ್ ರವರ ಜನ್ಮ ದಿನಾಚರಣೆಯ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ “ಕಾರ್ಮಿಕ ಮತ್ತು ಉದ್ಯೋಗ ಅಂಕಿ-ಅಂಶಗಳು’ ವಿಷಯ ಕುರಿತು ಪ್ರಬಂಧ ಸ್ಪರ್ಧೆಯನ್ನು ಜೂ. ೨೭ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

  ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ರೂ. ೧೦೦೦, ದ್ವಿತೀಯ- ರೂ. ೫೦೦ ಹಾಗೂ ತೃತೀಯ ಸ್ಥಾನ ಪಡೆದವರಿಗೆ ರೂ. ೨೫೦ ಗಳ ನಗದು ಬಹುಮಾನ ನೀಡಲಾಗುವುದು.  ಜೂ. ೨೯ ರಂದು ಕೊಪ್ಪಳದಲ್ಲಿ ಏರ್ಪಡಿಸಲಾಗುವ ಸಂಖ್ಯಾಶಾಸ್ತ್ರಜ್ಞ ಪ್ರೊ. ಪ್ರಶಾಂತ ಚಂದ್ರ ಮಹಾಲನೋಬಿಸ್ ರವರ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು.  ಸ್ಪರ್ಧೆಯಲ್ಲಿ ಭಾಗವಹಿಸಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಕಾಲೇಜಿನ ಗುರುತಿನ ಪತ್ರದೊಂದಿಗೆ ಹಾಜರಾಗಬೇಕು.  ಜಿಲ್ಲೆಯ ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಜೂ. ೨೭ ರಂದು ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಾಜರಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು.  ಹೆಚ್ಚಿನ ವಿವರಗಳಿಗೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ- ೯೪೪೯೮೧೨೫೧೧ ಅಥವಾ ೨೨೧೮೬೯ ಕ್ಕೆ ಸಂಪರ್ಕಿಸಬಹುದಾಗಿದೆ.
Please follow and like us:
error

Leave a Reply

error: Content is protected !!