ಸಚಿವ ತಂಗಡಗಿಯಿಂದ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರಕ್ಕೆ ಚಾಲನೆ

  ಸ್ವರಭಾರತಿ ಗ್ರಾಮೀಣಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಕಲ್ಯಾಣ ಕರ್ನಾಟಕ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕೆ ರವಿವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಚಾಲನೆ ನೀಡಿದರು.
                 ನಗರದಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿ ಸಚಿವರು ಪ್ರಚಾರಕ್ಕೆ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಸಮ್ಮೇಳನಕ್ಕೆ ಪೂರ್ಣ ಸಹಕಾರ ನೀಡುವದಾಗಿಯು ಮತ್ತು ಭಾಗವಹಿಸುವದಾಗಿ ಹೇಳಿದ ಅವರು ಉತ್ತಮ ಕೆಲಸ ಎಂದರು.
ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿ. ಪಂ. ಅಧ್ಯಕ್ಷ ಟಿ. ಜನಾರ್ಧನ, ಜಿ. ಪಂ. ಸದಸ್ಯ ನಾಗನಗೌಡ ಮಾಲಿಪಾಟೀಲ, ಎಪಿಎಂಸಿ ಮಾಜಿ ಅಧ್ಯಕ್ಷ ಶರಣಪ್ಪ, ಸಂಸ್ಥೆಯ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಶಿವಾನಂದ ಹೊದ್ಲೂರ, ಕಾಂಗ್ರೆಸ್ ಜಿಲ್ಲಾ ಎಸ್ ಸಿ ಘಟಕ ಅಧ್ಯಕ್ಷ ಗಾಳೆಪ್ಪ ಪೂಜಾರ, ಯುವಜನ ಸೇವಾ ಕೀಡಾ ಇಲಾಖೆ ಸಹಾಯಕ ನಿರ್ದೇಶಕ ವೈ. ಸುದರ್ಶನ, ಇಲಾಖೆಯ ರಾಮಕೃಷ್ಣ ಇತರರು ಇದ್ದರು. ಎರಡು ದಿನ ನಡೆಯುವ ಎರಡು ಸಮಮೇಳನಗಳನನು ಯಶಸ್ವಿಗೊಳಿಸುವಂತೆ ಸಮ್ಮೇಳನಗಳ ಮಯಖ್ಯ ಸಂಘಟಕ ಗೊಂಡಬಾಳ  ತಿಳಿಸಿದ್ದಾರೆ.
Please follow and like us:
error

Related posts

Leave a Comment