ನಾಮಪತ್ರ ಸಲ್ಲಿಕೆ : ಅಭ್ಯರ್ಥಿಯೂ ಸೇರಿ ಐವರಿಗೆ ಮಾತ್ರ ಪ್ರವೇಶ

  ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮಾ. ೧೯ ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಯೂ ಸೇರಿದಂತೆ ಒಟ್ಟು ೦೫ ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿರುತ್ತದೆ.
  ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ ವೇಳಾಪಟ್ಟಿಯಂತೆ ಮಾ.೧೯ ರಿಂದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸ್ವೀಕರಿಸಲಾಗುವುದು.  ಚುನಾವಣಾಧಿಕಾರಿಗಳ ಕಚೇರಿಯೊಳಗೆ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಯೂ ಸೇರಿದಂತೆ ಒಟ್ಟು ಐದು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ.  ಅಲ್ಲದೆ ಚುನಾವಣಾಧಿಕಾರಿ ಕಚೇರಿಯ ೧೦೦ ಮೀ. ಆವರಣದೊಳಗೆ ಕೇವಲ ೦೩ ವಾಹನಗಳು ಮಾತ್ರ ಬರಲು ಅವಕಾಶ ಇರುತ್ತದೆ.  ಈಗಾಗಲೆ ಅಗತ್ಯ ಪೊಲೀಸ್ ಬಂದೋಬಸ್ತ್‌ಗೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದ್ದು, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್  

ಕೋರಿದ್ದಾರೆ.

Leave a Reply