ಮತದಾರರ ಜಾಗೃತಿ ಗೀತೆಗಳ ಪ್ರಸಾರಕ್ಕೆ ಸೂಚನೆ

 ಮತದಾರರಲ್ಲಿ ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತದಾರರ ಜಾಗೃತಿ ಗೀತೆಗಳ ಪ್ರಸಾರ ಕೈಗೊಂಡು ಮತದಾರರಲ್ಲಿ ಅರಿವು ಮೂಡಿಸಲು ಶ್ರಮಿಸುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಸೂಚನೆ ನೀಡಿದ್ದಾರೆ.
  ಮತದಾರರ ಜಾಗೃತಿ ಗೀತೆಗಳ ಸಿ.ಡಿ. ಗಳನ್ನು ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ರಸ್ತೆ ಸಾರಿಗೆ ಸಂಸ್ಥೆಯ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಗೆ ಈಗಾಗಲೆ ಪೂರೈಕೆ ಮಾಡಲಾಗಿದ್ದು, ಈ ಹಾಡುಗಳನ್ನು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಾಹನಗಳಿಗೆ ಅಳವಡಿಸಲಾಗಿರುವ ಧ್ವನಿವರ್ಧಕ ವ್ಯವಸ್ಥೆಯಲ್ಲಿ ಪ್ರಸಾರ ಮಾಡಬೇಕು.  ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಧ್ವನಿವರ್ಧಕ ವ್ಯವಸ್ಥೆಯಲ್ಲಿಯೂ ಸಹ ಈ ಹಾಡುಗಳನ್ನು ಪ್ರಸಾರಗೊಳಿಸಿ, ಮತದಾರರಲ್ಲಿ ಜಾಗೃತಿ ಮೂಡಿಸಲು ಶ್ರಮಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Leave a Reply