ಡಾ. ಟಿ. ಶಶಿಧರ್‌ಗೆ ರಾಜ್ಯಮಟ್ಟದ ಶ್ರೇಷ್ಠ ಪಶುವೈದ್ಯ ಪ್ರಶಸ್ತಿ ಪ್ರದಾನ

 ನಗರದ ಪಶು ವೈದ್ಯಕೀಯ ಪರೀಕ್ಷರ ತರಬೇತಿ ಕೇಂದ್ರದ ಪಶು ವೈದ್ಯಾಧಿಕಾರಿ ಡಾ. ಟಿ ಶಶಿಧರ್ ಅವರಿಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ರಾಜ್ಯಮಟ್ಟದ ’ಶ್ರೇಷ್ಠ ಪಶು ವೈದ್ಯ ಪ್ರಶಸಿ’ ಲಭಿಸಿದೆ.
ಗುಲ್ಬರ್ಗಾದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಪಶುವೈದ್ಯಕೀಯ ತಾಂತ್ರಿಕ ವಿಚಾರ ಸಂಕಿರಣದಲ್ಲಿ ಪಶುಸಂಗೋಪನಾ ಇಲಾಖೆಯ ಮಾಜಿ ಸಚಿವ ರೇವು ನಾಯಕ ಬೆಳಮಗಿ ಅವರು ಡಾ. ಶಶಿಧರ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ್, ಕರ್ನಾಟಕ ಪಶುವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ. ಟಿ ಶ್ರೀನಿವಾಸ ರೆಡ್ಡಿ, ಗುಲ್ಬರ್ಗಾ ಜಿಲ್ಲಾ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಸಿದ್ಧರಾಮಪ್ಪ ಪಾಟೀಲ್ ದಂಗಾಪುರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಕರ್ನಾಟಕ ಪಶು ವೈದ್ಯಕೀಯ ಸಂಘ ಪ್ರತಿ ಎರಡು ವರ್ಷಗಳಿಗೊಮ್ಮೆ ಪಶುವೈದ್ಯಕೀಯ  ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಪಶುವೈದ್ಯಾಧಿಕಾರಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸುತ್ತದೆ.
ಪರಿಚಯ: ಹೂವಿನ ಹಡಗಲಿ ತಾಲೂಕು ಮಾಗಳ ಗ್ರಾಮದ ನಿವೃತ್ತ ಉಪನ್ಯಾಸಕ ಟಿ. ಬಸವರಾಜ ಮತ್ತು ಶ್ರೀಮತಿ ವಿಜಯ ದಂಪತಿ ಪುತ್ರರಾಗಿರುವ ಡಾ. ಟಿ ಶಶಿಧರ್ ಅವರು ಉತ್ತರ ಪ್ರದೇಶದ ಬರೇಲಿಯ ಇಜ್ಜತ್ ನಗರದಲ್ಲಿರುವ ಪ್ರತಿಷ್ಠಿತ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಪಶುವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾದವರು.  

Leave a Reply