ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

 ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ. ೧೫ ರಿಂದ ೩೧ ರವರೆಗೆ ಜಿಲ್ಲೆಯ ೧೧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಆದೇಶ ಹೊರಡಿಸಿದ್ದಾರೆ.
  ನಿಷೇಧಾಜ್ಞೆ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ಮಾ. ೧೫ ರಿಂದ ೩೧ ರವರೆಗೆ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧೨-೧೫ ರವರೆಗೆ ಹಾಗೂ ಮಾ. ೨೨ ರಂದು ಮಧ್ಯಾಹ್ನ ೨ ರಿಂದ ಸಂಜೆ ೫-೧೫ ರವರೆಗೆ ಜಾರಿಯಲ್ಲಿರುತ್ತದೆ.  ಇದರನ್ವಯ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದ್ದು, ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಜಾಗೃತ ದಳದವರನ್ನು ಹೊರತುಪಡಿಸಿ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

Leave a Reply