ಫೆ.೦೯ ರಂದು ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ ಕಾರ್ಯಾಗಾರ

   ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯನ್ನು ಕೊಪ್ಪಳ ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕುರಿತಂತೆ ಒಂದು ದಿನದ ಕಾರ್ಯಾಗಾರವನ್ನು ಫೆ.೦೯ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
  ಕೊಪ್ಪಳ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಜರುಗುವ ಈ ಕಾರ್ಯಾಗಾರದಲ್ಲಿ ಪಿಡಿಓ ಗಳು, ಕರವಸೂಲಿಗಾರರು, ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎ.ಎನ್.ಎಂ.ಗಳು, ಆಶಾ ಕಾರ್ಯಕರ್ತೆಯರು ಹಾಗೂ ನಗರಸಭೆಯ ಕಂದಾಯ ನಿರೀಕ್ಷಕರು ಹಾಗೂ ಆರೋಗ್ಯ ನಿರೀಕ್ಷಕರು ಭಾಗವಹಿಸಲಿದ್ದಾರೆ.  ಯೋಜನೆಯನ್ನು ತಾಲೂಕಿನಾದ್ಯಂತ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಗರಿಷ್ಟ ೫ ಜನ ಕುಟುಂಬದ ಸದಸ್ಯರು ಒಳಗೊಂಡಂತಂಹ ಕುಟುಂಬಗಳಿಗೆ ನೋಂದಣಿ ಮಾಡಿಸಲು ಈಗಾಗಲೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಕೊಪ್ಪಳ ತಹಶೀಲ್ದಾರರು ತಿಳಿಸಿದ್ದಾರೆ.

Leave a Reply