ಜೂ.೧೩ ರಿಂದ ಸಕಾಲ ಸೇವೆ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ತರಬೇತಿ

  ಕೊಪ್ಪಳ ತಹಶೀಲ್ದಾರ್ ಕಛೇರಿಯಲ್ಲಿರುವ ಜಿಲ್ಲಾ ತರಬೇತಿ ಸಂಸ್ಥೆಯ ಆವರಣದಲ್ಲಿ ಜೂ.೧೩ ಮತ್ತು ೧೪ ರಂದು ಬೆಳಿಗ್ಗೆ ೧೦.೩೦ ಕ್ಕೆ ಎರಡು ದಿನಗಳ ಕಾಲ ಸಕಾಲ ಸೇವೆಗಳ ಅಧಿನಿಯಮದ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ತರಬೇತಿಯನ್ನು ಏರ್ಪಡಿಸಲಾಗಿದೆ.
ಈ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಆಗಮಿಸಲಿದ್ದಾರೆ. ಈ   ಕಾರ್ಯಾಗಾರದಲ್ಲಿ ಪಟ್ಟಣ ಪಂಚಾಯತ್ ಯಲಬುರ್ಗಾ, ಪುರಸಭೆ ಕುಷ್ಟಗಿ, ಪೌರಾಯುಕ್ತರು ನಗರಸಭೆ, ಗಂಗಾವತಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ವಾಣಿಜ್ಯ ತೆರಿಗೆ ಇಲಾಖೆಯವರು, ಕೊಪ್ಪಳ ತಾಲೂಕ ಪಂಚಾಯತಿಯ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
Please follow and like us:
error