You are here
Home > Koppal News > ಈಶ್ವರಚಂದ್ರ ವಿದ್ಯಾಸಾಗರ್ -ಸನ್ಮಾನ

ಈಶ್ವರಚಂದ್ರ ವಿದ್ಯಾಸಾಗರ್ -ಸನ್ಮಾನ


ಶ್ಲಾಘನೀಯ ಸೇವೆಗಾಗಿ ರಾಷ್ಟ್ರಪತಿ ಪದಕ ಪುರಸ್ಕೃತರಾದ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಸವದಿ ಅವರು ಸನ್ಮಾನಿಸಿ ಗೌರವಿಸಿದರು. ಸಂಸದ ಶಿವರಾಮಗೌಡ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕಳಕಪ್ಪ ಜಾಧವ್, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಮುಂತಾದವರು ಉಪಸ್ಥಿತರಿದ್ದರು.

Leave a Reply

Top