ಕನಕದಾಸರ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸಭೆಯಲ್ಲಿ ಭಾಗವಹಿಸಿದ್ದ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಕನಕದಾಸರ ಜಯಂತಿ ಆಚರಣೆಯ ಅಂಗವಾಗಿ ಕೊಪ್ಪಳ ನಗರದ ಎಲ್ಲ ಪ್ರಮುಖ ರಸ್ತೆಗಳನ್ನು ಸ್ವಚ್ಛಗೊಳಿಸಿ, ಮೆರವಣಿಗೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ ಸಮಾರಂಭದಲ್ಲಿ ಭಾಗವಹಿಸುವವರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಲಘು ಉಪಹಾರದ ವ್ಯವಸ್ಥೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಕೋರಿದರು. ಅಲ್ಲದೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಮುಖಂಡರು ಮಾತನಾಡಿ, ಕೊಪ್ಪಳ ನಗರದ ಬಸ್ ನಿಲ್ದಾಣ ಎದುರು ಇರುವ ಕನಕದಾಸರ ವೃತ್ತದ ಬಳಿ ಮಾಂಸ, ಮದ್ಯದ ಅಂಗಡಿಗಳಿದ್ದು, ಸರ್ಕಲ್ನಲ್ಲಿ ಸ್ವಚ್ಛತೆಯ ಕೊರತೆ ಇದೆ. ಇಂತಹ ಅಂಗಡಿಗಳನ್ನು ಅಲ್ಲಿಂದ ಬೇರೆಡೆಗೆ ಸ್ಥಳಾಂತರಿಸಬೇಕು. ಅಲ್ಲದೆ ಇಲ್ಲಿ ಫ್ಲೆಕ್ಸ್ ಫಲಕಗಳ ಹಾವಳಿ ಮಿತಿಮೀರಿದ್ದು, ಕನಕದಾಸರ ವೃತ್ತ ಸಂಪೂರ್ಣ ಮುಚ್ಚಿಹೋಗಲು ಕಾರಣವಾಗಿದೆ. ಇಂತಹ ಫ್ಲೆಕ್ಸ್ ಹಾವಳಿಯನ್ನು ತಡೆಗಟ್ಟಿ, ಕನಕದಾಸರ ವೃತ್ತಕ್ಕೆ ಸೂಕ್ತ ವ್ಯವಸ್ಥೆ ಕೈಗೊಳ್ಳಲು ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕನಕದಾಸರ ಸರ್ಕಲ್ ಬಳಿ ಇರುವ ಮಾಂಸ ಮತ್ತು ಮದ್ಯದಂಗಡಿಗಳನ್ನು ತೆಗೆಯಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಈ ಕುರಿತಂತೆ ನಗರಸಭೆಯ ಆಡಳಿತ ಮಂಡಳಿಯವರು ಸಹ, ಸಾಮಾನ್ಯ ಸಭೆಯಲ್ಲಿ ವಿಷಯ ಮಂಡಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲು ಕ್ರಮ ಕೈಗೊಳ್ಳುವಂತೆ ನಗರಸಭೆಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.
ಭಕ್ತ ಕನಕದಾಸರ ಜಯಂತಿಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಾಗೂ ಎಲ್ಲ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಆಚರಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಲು, ಅಲ್ಲದೆ ಮೆರವಣಿಗೆ ಹಾಗೂ ಸಮಾರಂಭದಲ್ಲಿ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಡಿವೈಎಸ್ಪಿ ಎಂ. ರಾಜೀವ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ, ಗಣ್ಯರಾದ ವಿಠ್ಠಪ್ಪ ಗೋರಂಟ್ಲಿ, ಅಲ್ಲಮಪ್ರಭು ಬೆಟ್ಟದೂರ, ಶಿವಾನಂದ ಹೊದ್ಲೂರು, ಮಂಜುನಾಥ ಗೊಂಡಬಾಳ, ವಿಜಯ ಕವಲೂರು, ಸೇರಿದಂತೆ ಸಮಾಜದ ಅನೇಕ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆ ನೀಡಿದರು.
Please follow and like us: