ಸಂಘ ಸಂಸ್ಥೆಗಳಿಂದ ಪರೀಕ್ಷೆ ನಡೆಸಲು ಅವಕಾಶವಿಲ್ಲ- ಮಂಟೇಲಿಂಗಾಚಾರ್

ಕೊಪ್ಪಳ ಆ. : ಜಿಲ್ಲೆಯಲ್ಲಿ ಪ್ರೌಢಶಾಲಾ ತರಗತಿಗಳ ಮಧ್ಯಾಮಾವಧಿ ಪರೀಕ್ಷೆಗಳನ್ನು ಮುಖೋಪಾಧ್ಯಾಯರ ಸಂಘದಿಂದ ನಡೆಸುವ ಕುರಿತು ಇಲಾಖೆಗೆ ಮಾಹಿತಿ ಲಭ್ಯವಾಗಿದ್ದು, ಯಾವುದೇ ಸಂಘ ಸಂಸ್ಥೆಗಳಿಂದ ಪರೀಕ್ಷೆ ನಡೆಸಲು ಅವಕಾಶವಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದವರು ಪ್ರಸಕ್ತ ಸಾಲಿನಲ್ಲಿ ಪ್ರೌಢಶಾಲಾ ತರಗತಿಗಳ ಮಧ್ಯಮಾವಧಿ ಪರೀಕ್ಷೆಗಳನ್ನು ನಡೆಸುವ ಕುರಿತು ಇಲಾಖೆಗೆ ಪತ್ರ ಬರೆದಿದೆ. ಆದರೆ ಯಾವುದೇ ಸಂಘ ಸಂಸ್ಥೆಗಳಿಂದ ಪರೀಕ್ಷೆ ನಡೆಸಲು ನಿಯಮಗಳಲ್ಲಿ ಅವಕಾಶವಿಲ್ಲ. ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಈ ಬಗ್ಗೆ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ವಿಷಯವಾರು ಶಿಕ್ಷಕರೇ ಪರೀಕ್ಷಾ ಪತ್ರಿಕೆಗಳನ್ನು ತಯಾರಿಸಿ ಆಯಾ ಶಾಲೆಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಹಾಗೂ ಮೌಲ್ಯಮಾಪನ ನಡೆಸಲು ಅವಕಾಶವಿರುತ್ತದೆ. ಈ ಬಗ್ಗೆ ಪ್ರಸಕ್ತ ಸಾಲಿನ ಪ್ರೌಢಶಾಲಾ ಶಿಕ್ಷಣದ ಕೈಪಿಡಿಯಲ್ಲಿಯೂ ತಿಳಿಸಲಾಗಿದೆ. ಯಾವುದೇ ಶಿಕ್ಷಕರು ಅಥವಾ ಸಂಘ, ಸಂಸ್ಥೆಗಳು ಸರ್ಕಾರದ ಆದೇಶ ಹಾಗೂ ನಿಯಮಗಳನ್ನು ಉಲ್ಲಂಘಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್ ಅವರು ಎಚ್ಚರಿಕೆ ನೀಡಿದ್ದಾರೆ.
Please follow and like us:

Related posts

Leave a Comment