ಫೆ. ೧೯ ರಂದು ಶಿವಾಜಿ ಹಾಗೂ ಸರ್ವಜ್ಞರ ಜಯಂತಿ : ಭಾಗವಹಿಸಲು ಸೂಚನೆ

 ಸರ್ಕಾರದ ವತಿಯಿಂದ ಏರ್ಪಡಿಸಲಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಕವಿ ಸರ್ವಜ್ಞರ ಜಯಂತಿ ಆಚರಣೆ ಕಾರ್ಯಕ್ರಮ ಫೆ.೧೯ ರಂದು ಕೊಪ್ಪಳ ನಗರದಲ್ಲಿ ಆಯೋಜಿಸಲಾಗಿದೆ.
  ಮಹನೀಯರ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೯-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದೆ.  ಸಮಾರಂಭದ ನಂತರ ಬೆಳಿಗ್ಗೆ ೧೧ ಗಂಟೆಗೆ  ಸಾಹಿತ್ಯ ಭವನದಿಂದ ಜವಾಹರ ರಸ್ತೆ, ಗಡಿಯಾರ ಕಂಬ ಮಾರ್ಗದ ಮೂಲಕ ತುಳಜಾ ಭವಾನಿ ದೇವಸ್ಥಾನದವರೆಗೆ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಕವಿ ಸರ್ವಜ್ಞರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.   ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ತಪ್ಪದೆ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ||ಸುರೇಶ ಇಟ್ನಾಳ ಸೂಚನೆ ನೀಡಿದ್ದಾರೆ. 
Please follow and like us:
error