ಭಾಗ್ಯನಗರ ರೈಲ್ವೆ ಗೇಟ್ ಮೇಲ್ಸೇತುವೆ ನಿರ್ಮಾಣ ಕಾರ್ಯ ಶೀಘ್ರ ಆರಂಭ- ಸಂಸದ ಕರಡಿ ಸಂಗಣ್ಣ

  ಭಾಗ್ಯನಗರ ರೈಲ್ವೆ ಗೇಟ್‌ಗೆ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಶೀಘ್ರದಲ್ಲೇ ಪ್ರಾರಂಭಾಗಲಿದೆ ಎಂದು ಸಂಸದ ಕರಡಿ ಸಂಗಣ್ಣ ತಿಳಿಸಿದ್ದಾರೆ.
  ಭಾಗ್ಯನಗರ ರೈಲ್ವೆ ಗೇಟ್ ಸಂಖ್ಯೆ-೬೨ ಕ್ಕೆ ಮೇಲ್ಸೇತುವೆ ನಿರ್ಮಾಣಕ್ಕೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಇವರು ೨೦. ೩೨ ಕೋಟಿ ರೂ. ಗಳಿಗೆ ಹೈದ್ರಾಬಾದಿನ ಗುತ್ತಿಗೆದಾರ ಮುರಳಿ ಕೃಷ್ಣರಾವ್ ಅವರಿಗೆ ಕಾರ್ಯಾದೇಶ ನೀಡಿದ್ದು, ಕಾಮಗಾರಿ ಪೂರ್ಣಗೊಳಿಸಲು ೧೫ ತಿಂಗಳ ಕಾಲಮಿತಿ ನಿಗದಿಪಡಿಸಲಾಗಿದೆ ಎಂದು ಸಂಸದ ಕರಡಿ ಸಂಗಣ್ಣ ತಿಳಿಸಿದ್ದಾರೆ.
Please follow and like us:
error