೩೭೧ ಜೆಕಲಂ ಅರಿವು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

ಕೊಪ್ಪಳ ನಗರದ ಹೊರಭಾಗದಲ್ಲಿರುವ ದದೇಗಲ್ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜುನಲ್ಲಿ ಕಾಲೇಜು ವತಿಯಿಂದ ವಿದ್ಯಾರ್ಥಿಗಳಿಗಾಗಿ ೩೭೧ ಜೆ ಕಲಂ ಅರಿವು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಶಿವಕುಮಾರ್ ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿಗಳು ಮಾತನಾಡಿ ವಿದ್ಯಾರ್ಥಿಗಳಿಗೆ ಹೈದ್ರಾಬಾದ್ ಕರ್ನಾಟಕಕ್ಕೆ ೩೭೧ ಜೆ ಕಲಂ  ಬಗ್ಗೆ ವಿಸ್ತಾರವಾಗಿ ತಿಳಿಸಿ ಹೈದ್ರಾಬಾದ್ ಕರ್ನಾಟಕ ೩೭೧ ಜೆ ಕಲಂ ತಿದ್ದುಪಡಿಗಾಗಿ ಹೋರಾಟ ಮಾಡಿದ ರೀತಿಯನ್ನು ಎಳೆಎಳೆಯಾಗಿ ಬಿಡಿಸಿ ಹೇಳಿದರು .
                    ಹೈದ್ರಾಬಾದ್ ಕರ್ನಾಟಕದ ಅಭಿವೃದ್ದಿಗಾಗಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ೩೭೧ ಜೆ ಕಲಂ ತಿದ್ದು ಪಡಿಯಿಂದ ನಾವು ಶಿಕ್ಷಣ ಉದ್ಯೋಗ ಅಭಿವೃದ್ದಿ ಕಾರ್ಯಗಳಲ್ಲಿ ಮೀಸಲಾತಿಯನ್ನು ಪಡೆದು ನಮ್ಮನ್ನು ನಾವು ಅಭಿವೃದ್ದಿಯತ್ತ ಕೊಂಡೊಯ್ಯಬಹುದು ಎಂದು ಅಭಿಪ್ರಾಯ ವ್ಯೆಕ್ತ ಪಡಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹುಲುಗಪ್ಪ ಕಟ್ಟಿಮನಿ ಮಾಸ್ತಿ ಸ್ಕೂಲ್ ಮುಖ್ಯಸ್ಥರು ಇವರು ಮಾತನಾಡಿ ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ೩೭೧ ಜೆ ಕಲಂನ್ನು ಯಶಸ್ವಿಯಾಗಿ ಬಳಸಿಕೊಳ್ಳಲು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಅಮೀನ್ ಸಾಬ್ ಪ್ರಾಚಾರ್ಯರು ಕಾರ್ಯಕ್ರಮದ ಬಗ್ಗೆ ಅಧ್ಯಕ್ಷೀಯ ಭಾಷಣವನ್ನು ಮಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ನಿಲಯಪಾಲಕರಾದ ಶೋಭಾ ವಂದಾಲ್, ನಾಗರಾಜ್ ನಾಗರೆಡ್ಡಿ ಪ್ರಕಾಶ್ ಮತ್ತಿತರು ಉಪಸ್ಥತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಲತಾ ಪಾಟೀಲ್‌ರವರು ನಿರೂಪಣೆಯನ್ನು ದ್ಯಾಮಣ್ಣ ಗದ್ದಿ ಇವರು ಸ್ವಾಗತವನ್ನು ತಿಮ್ಮಣ್ಣ ಗುಳೇದ್ ಇವರು ವಂದನಾರ್ಪಣೆಯನ್ನು ನಡೆಸಿಕೊಟ್ಟರು. 
Please follow and like us:
error