ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ.

ಕೊಪ್ಪಳ. ಜ. ೦೫ (ಕ ವಾ) ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಜ. ೦೬ ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರು ಅಂದು ಬೆಳಿಗ್ಗೆ ಹಂಪಿ ಎಕ್ಸ್‌ಪ್ರೆಸ್ ಮೂಲಕ ಹೊಸಪೇಟೆಗೆ ಆಗಮಿಸಿ, ಮುನಿರಾಬಾದ್‌ನ ಇಂದ್ರಭವನ ಅತಿಥಿ ಗೃಹಕ್ಕೆ ತೆರಳುವರು.  ನಂತರ ಬೆಳಿಗ್ಗೆ ೧೧-೩೦ ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸಿ, ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಜಿಲ್ಲಾ ಪಂಚಾಯತಿ ಕೆ.ಡಿ.ಪಿ. ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು.  ಸಚಿವರು ಅದೇ ದಿನ ಸಂಜೆ ೬ ಗಂಟೆಗೆ ಕಾರಟಗಿಗೆ ತೆರಳಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಕೈಗೊಂಡು ವಾಸ್ತವ್ಯ ಮಾಡುವರು.
Please follow and like us:

Related posts

Leave a Comment