Breaking News
Home / Koppal News / ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನೂತನ ಕಾರ್ಯಾಲಯ ಉದ್ಘಾಟನೆ

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನೂತನ ಕಾರ್ಯಾಲಯ ಉದ್ಘಾಟನೆ

  ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ ಕೊಪ್ಪಳದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾಡಳಿತ ಭವನದಲ್ಲಿನ ನೂತನ ಕಾರ್ಯಾಲಯದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಶನಿವಾರ ನೆರವೇರಿಸಿದರು.  
   ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ ಕೊಪ್ಪಳದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಈಗಾಗಲೆ ಸ್ಥಾಪನೆಗೊಂಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಲಾಗುತ್ತಿತ್ತು.  ಇದೀಗ ಜಿಲ್ಲಾಡಳಿತ ಭವನದಲ್ಲಿ ನೂತನ ಕಚೇರಿಯನ್ನು ಜಿಲ್ಲಾಢಳಿತ ಭವನದಲ್ಲಿ ನಿರ್ಮಿಸಲಾಗಿದ್ದು, ಜಿಲ್ಲಾಧಿಕಾರಿಗಳು ಉದ್ಘಾಟನೆ ನೆರವೇರಿಸಿದರು.   ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಗದೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಾಣಾ ಯೋಜನೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About admin

Leave a Reply

Scroll To Top