ಕೇಂದ್ರ ಸಚಿವ ಗೋಪಿನಾಥ ಮುಂಡೆ ನಿಧನ : ಸಂಸದ ಸಂಗಣ್ಣ ಕರಡಿ ಸಂತಾಪ

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗೋಪಿನಾಥ ಮುಂಡೆ ಅವರ ಅಕಾಲಿಕ ನಿಧನಕ್ಕೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

  ಇತ್ತೀಚೆಗಷ್ಟೇ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದ ಗೋಪಿನಾಥ ಮುಂಡೆ ಅವರು ಅಪಘಾತವೊಂದರಲ್ಲಿ ನಿಧನರಾಗಿದ್ದು, ಅವರು ಸಜ್ಜನ ಹಾಗೂ ಅನುಭವಿ ರಾಜಕಾರಣಿಯಾಗಿದ್ದರು.  ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿರುವುದಾಗಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ  .

Related posts

Leave a Comment