You are here
Home > Koppal News > ಸೆ.೧೭ ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ

ಸೆ.೧೭ ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ

  ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಸೆ.೧೭ ರಂದು ಬೆಳಿಗ್ಗೆ ೯.೦೦ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ. 
ಈ ಕಾರ್ಯಕ್ರಮದ ಧ್ವಜಾರೋಹಣವನ್ನು ರಾಜ್ಯ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸಲಿದ್ದಾರೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಸಂಸದ ಶಿವರಾಮೇಗೌಡ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಹನಮಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ.ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ ಅವರು ಆಗಮಿಸಲಿದ್ದಾರೆ. ವಿಶೇಷ ಉಪನ್ಯಾಸಕರಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರೋ. ಡಾ|| ಪಂಚಾಕ್ಷರಿ ಹಿರೇಮಠ ಅವರು ಆಗಮಿಸಲಿದ್ದಾರೆ.
ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ ೮.೦೦ ಗಂಟೆಗೆ ವಿವಿಧ ಸ್ಥಬ್ದ ಚಿತ್ರಗಳ ಮೆರವಣಿಗೆಯು ಕೊಪ್ಪಳ ಮಿನಿ ವಿಧಾನಸೌಧ ಆವರಣದಿಂದ ಧ್ವಜಾರೋಹಣ ನಡೆಯುವ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಲಿದೆ. ಅಲ್ಲದೇ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ., ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಗೃಹರಕ್ಷಕ ದಳಗಳಿಂದ ಪಥ ಸಂಚಲನ ಮತ್ತು ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ಜರುಗಲಿದೆ. ಅಲ್ಲದೇ ಅಂದು ಸಾಯಂಕಾಲ ೬.೦೦ ರಿಂದ ೯.೦೦ ರವರೆಗೆ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಸಮೂಹ ನೃತ್ಯಗಳು, ಭರತನಾಟ್ಯ, ಜಾನಪದ ನೃತ್ಯ, ದೇಶಭಕ್ತಿ ಗೀತೆಗಳು ಹಾಗೂ ಸಮೂಹ ಗೀತೆಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳು ಜರುಗಲಿವೆ.

Leave a Reply

Top