ಜಿಲ್ಲೆಯಲ್ಲಿ ಡಿ.ಜೆ ಸೌಂಡ್ ಸಿಸ್ಟಮ್ ಬಳಕೆ ನಿಷೇಧ

 ಜಿಲ್ಲಾ ಪೊಲೀಸ್ ಅಧೀಕ್ಷಕರು,   ಕೊಪ್ಪಳ ಸಾರ್ವಜನಿಕ ಪ್ರಕಟಣೆ 
ಕೊಪ್ಪಳ ಜಿಲ್ಲೆಯ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ, ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಬ್ದ ಮಾಲಿನ್ಯ ತಡೆಗಟ್ಟಲು ಡಿ.ಜೆ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕ ಮೆರವಣಿಗೆಗಳಲ್ಲಾಗಲಿ ಯಾವುದೇ ಹಬ್ಬ ಹರಿದಿನಗಳ ಕಾರ್ಯಕ್ರಮಗಳಲ್ಲಿ ಡಿ.ಜೆ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ. ಅಲ್ಲದೇ ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ಚರ್ಚ್, ಮಸೀದಿಗಳ ಮುಂದೆ ಪಟಾಕಿ ಸಿಡಿಸುವುದನ್ನು ಸಹಿತ ನಿಷೇಧಿಸಲಾಗಿದೆ. ಮುಂಬರುವ ಗಣೇಶ ಚತುರ್ಥಿ ಹಬ್ಬದ ಮೆರವಣಿಗೆಯಲ್ಲಿ ಸಹ ಡಿ.ಜೆ. ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಹಾಗೂ ಕೊಪ್ಪಳ ಜಿಲ್ಲೆಯ ಎಲ್ಲಾ ಸಂಘಟನೆಗಳಲ್ಲಿ ಸಹಕರಿಸಲು ಕೋರಲಾಗಿದೆ.

Leave a Reply