You are here
Home > Koppal News > ಈ ದಾಖಲೆಗಳಿದ್ದಲ್ಲಿ ಮತ ಚಲಾಯಿಸಬಹುದು

ಈ ದಾಖಲೆಗಳಿದ್ದಲ್ಲಿ ಮತ ಚಲಾಯಿಸಬಹುದು

  ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ಇಲ್ಲದೇ ಇರುವವರು, ಚುನಾವಣಾ ಆಯೋಗ ಸೂಚಿಸಿರುವ ೨೩ ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ಇದ್ದರೆ ಸಾಕು, ತಮ್ಮ ಮತ ಚಲಾಯಿಸಬಹುದಾಗಿದೆ.
  ವಿಧಾನಸಭೆ ಚುನಾವಣೆಗೆ ಮೇ. ೦೫ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನ ಮಾಡಲು ಅವಧಿ ನಿಗದಿಪಡಿಸಲಾಗಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕಡ್ಡಾಯವಾಗಿ ಇರಬೇಕು. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಹೊಂದಿರಬೇಕು, ಅಥವಾ ಈ ಬಾರಿ ಬೂತ್ ಮಟ್ಟದ ಅಧಿಕಾರಿಗಳು ನೀಡುವ ಮತದಾರರ ಗುರುತಿನ ಚೀಟಿ ಹೊಂದಿದ್ದಲ್ಲಿ ತಮ್ಮ ಮತವನ್ನು ಚಲಾಯಿಸಬಹುದು.  ಮೇಲಿನ ಎರಡೂ ದಾಖಲೆಗಳು ಇಲ್ಲದೇ ಇರುವವರಿಗೂ ಮತ ಚಲಾಯಿಸಲು ಚುನಾವಣಾ ಆಯೋಗ ಪರ್ಯಾಯವಾಗಿ ೨೩ ಬಗೆಯ ದಾಖಲೆಗಳನ್ನು ನಿಗದಿಪಡಿಸಿದ್ದು, ಈ ೨೩ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಗಳಿದ್ದಲ್ಲಿ, ಮತ ಚಲಾಯಿಸಬಹುದಾಗಿದೆ.  ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ವಾಹನ ಚಾಲನ ಪರವಾನಿಗೆ ಪತ್ರ, ಪಾನ್ ಕಾರ್ಡ್, ನೌಕರರ ಗುರುತಿನ ಚೀಟಿ, ಬ್ಯಾಂಕ್ ಖಾತೆ ಪುಸ್ತಕ, ಕಿಸಾನ್ ಕಾರ್ಡ್, ವಿದ್ಯಾರ್ಥಿಗಳಿಗೆ ಕಾಲೇಜುಗಳು ನೀಡುವ ಗುರುತಿನ ಚೀಟಿ, ಭಾವಚಿತ್ರವಿರುವ ಜಮೀನಿನ ಪಟ್ಟಾ, ನೋಂದಣಿಯಾದ ಡೀಡ್, ಭಾವಚಿತ್ರವಿರುವ ಪಡಿತರ ಚೀಟಿ, ಭಾವಚಿತ್ರವಿರುವ ಜಾತಿ ಪ್ರಮಾಣಪತ್ರ, ಮಾಜಿ ಸೈನಿಕರ, ವಯೋವೃದ್ಧ, ವಿಧವಾ ಪಿಂಚಣಿ ಪುಸ್ತಕ, ಸ್ವತಂತ್ರ್ಯ ಹೋರಾಟಗಾರರ ಗುರುತಿನ ಚೀಟಿ, ಶಸ್ತ್ರ ಪರವಾನಿಗೆ ಪತ್ರ, ಮಾಜಿ ಸೈನಿಕರ ಸಿಎಸ್‌ಡಿ ಕ್ಯಾಂಟೀನ್ ಕಾರ್ಡ್, ಅಂಗವಿಕಲರ ಪ್ರಮಾಣ ಪತ್ರ, ಸಂಧ್ಯಾ ಸುರಕ್ಷಾ ಮಂಜೂರಾತಿ ಪತ್ರ, ಉದ್ಯೋಗಖಾತ್ರಿ ಗುರುತಿನ ಚೀಟಿ, ಯಶಸ್ವಿನಿ ಕಾರ್ಡ್, ನಗರ/ಸ್ಥಳೀಯ ಸಂಸ್ಥೆಗಳ ನೌಕರರಿಗೆ ನೀಡಿರುವ ಗುರುತಿನ ಚೀಟಿ, ಕಾರ್ಮಿ ಇಲಾಖೆ ನೀಡಿರುವ ಆರೋಗ್ಯ ವಿಮಾ ಪ್ರಮಾಣ ಪತ್ರ, ಆರ್‌ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್, ಆಧಾರ ಕಾರ್ಡ್ ಸೇರಿದಂತೆ ೨೩ ದಾಖಲಾತಿಗಳಲ್ಲಿ ಯಾವುದಾದರೂ ಒಂದು ದಾಖಲೆ ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ  ತಿಳಿಸಿದೆ.

Leave a Reply

Top