೨೫ ರಂದು ಕೆ.ಬಸವರಾಜ ಹಿಟ್ನಾಳ ನಾಮಪತ್ರ ಸಲ್ಲಿಕೆ.

೨೫ ರಂದು ಕಾಂಗ್ರೆಸ್ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಸವರಾಜ ಹಿಟ್ನಾಳ ನಾಮಪತ್ರ ಸಲ್ಲಿಕೆ.
ಕೊಪ್ಪಳ-೨೨, ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಕೆ.ಬಸವರಾಜ ಹಿಟ್ನಾಳ ಅವರು ೨೫/೦೩/೨೦೧೪ ರಂದು ಬೆಳಿಗ್ಗೆ ೯-೦೦ ಗಂಟೆಗೆ ಸಿರಸಪ್ಪಯ್ಯನ ಮಠದಲ್ಲಿ ಪೂಜಾ ಸಲ್ಲಿಸಿ ನಾಮಪತ್ರ ಸಲ್ಲಿಸುವರು, ಲೋಕಸಭಾ ಕ್ಷೇತ್ರದ ಹಾಲಿ ಸಚಿವರು, ಶಾಸಕರು, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು, ಕ್ಷೇತ್ರದ ಎಲ್ಲಾ ಚುನಾಯಿತ ಪ್ರತಿನಿಧಿಗಳು ಪದಾಧಿಕಾರಿಗಳು, ಕೊಪ್ಪಳ ಲೋಕಸಭಾ ಕ್ಷೇತ್ರದ ಯುವಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಯುವಕಾಂಗ್ರೆಸ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಬೃಹತ್ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿ ನಾಮಪತ್ರ ಸಲ್ಲಿಕೆ ರ‍್ಯಾಲಿಯನ್ನು ಯಶಸ್ವಿಗೊಳಿಸಬೇಕೆಂದು ಪಕ್ಷದ ವಕ್ತಾರ ಅಕ್ಬರ ಪಾಷಾ ಪಲ್ಟನ್ ಕೋರಿದ್ದಾರೆ

Leave a Reply