ಮಂಗಳೂರು : ಡಿ. ೨೩ ರಂದು ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟನೆ

ಕೊಪ್ಪಳ ಡಿ.   ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆಯಡಿ ಯಲಬುರ್ಗಾ ತಾಲೂಕು ಮಂಗಳೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ನೂತನ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡದ ಉದ್ಘಾಟನಾ ಸಮಾರಂಭ ಡಿ. ೨೩ ರಂದು ಬೆಳಿಗ್ಗೆ ೧೦ ಗಂಟೆ ನಡೆಯಲಿದೆ.
  ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಕಟ್ಟಡದ ಉದ್ಘಾಟನೆ ನೆರವೇರಿಸುವರು.  ಯಲಬುರ್ಗಾ ಶಾಸಕ ಈಶಣ್ಣ ಗುಳಗಣ್ಣವರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.  ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ ವಲ್ಲ್ಯಾಪುರ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ (ವಿಧಾನಪರಿಷತ್) ಶಶಿಲ್ ಜಿ. ನಮೋಶಿ, ಮನೋಹರ ಮಸ್ಕಿ, ಹೆಚ್.ಸಿ. ನೀರಾವರಿ, ಹಾಲಪ್ಪ ಆಚಾರ್, ಜಿ.ಪಂ. ಉಪಾಧ್ಯಕ್ಷೆ ಸೀತಾ ಹಲಗೇರಿ, ಜಿ.ಪಂ. ಸದಸ್ಯ ಅಶೋಕ ತೋಟದ, ತಾ.ಪಂ. ಅಧ್ಯಕ್ಷೆ ನೀಲಮ್ಮ ಕೊಟ್ರಪ್ಪ ಜವಳಿ, ತಾ.ಪಂ. ಉಪಾಧ್ಯಕ್ಷ ಹೊಳೇಗೌಡ ಪೊಲೀಸ್ ಪಾಟೀಲ, ತಾ.ಪಂ. ಸದಸ್ಯೆ ಸುಮಂಗಲಾ ಉಪ್ಪಾರ, ಮಂಗಳೂರು ಗ್ರಾ.ಪಂ. ಅಧ್ಯಕ್ಷ ಮಂಜುನಾಥ ಶೆಟ್ಟಿ, ಉಪಾಧ್ಯಕ್ಷ ಮಹೇಶ ಗೂಗಿ ಮುಂತಾದ ಗಣ್ಯರು, ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸುವರು.
ಕುಕನೂರಿನಲ್ಲಿ ಡಿ. ೨೩ ರಂದು ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟನೆ
ಕೊಪ್ಪಳ ಡಿ.   ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆಯಡಿ ಯಲಬುರ್ಗಾ ತಾಲೂಕು ಕುಕನೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ನೂತನ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡದ ಉದ್ಘಾಟನಾ ಸಮಾರಂಭ ಡಿ. ೨೩ ರಂದು ಬೆಳಿಗ್ಗೆ ೧೧ ಗಂಟೆ ನಡೆಯಲಿದೆ.
  ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಕಟ್ಟಡದ ಉದ್ಘಾಟನೆ ನೆರವೇರಿಸುವರು.  ಯಲಬುರ್ಗಾ ಶಾಸಕ ಈಶಣ್ಣ ಗುಳಗಣ್ಣವರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.  ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ ವಲ್ಲ್ಯಾಪುರ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ (ವಿಧಾನಪರಿಷತ್) ಶಶಿಲ್ ಜಿ. ನಮೋಶಿ, ಮನೋಹರ ಮಸ್ಕಿ, ಹೆಚ್.ಸಿ. ನೀರಾವರಿ, ಹಾಲಪ್ಪ ಆಚಾರ್, ಜಿ.ಪಂ. ಉಪಾಧ್ಯಕ್ಷೆ ಸೀತಾ ಹಲಗೇರಿ, ಜಿ.ಪಂ. ಸದಸ್ಯ ಈರಪ್ಪ ಕುಡಗುಂಟಿ,  ಅಧ್ಯಕ್ಷೆ ನೀಲಮ್ಮ ಕೊಟ್ರಪ್ಪ ಜವಳಿ, ತಾ.ಪಂ. ಉಪಾಧ್ಯಕ್ಷ ಹೊಳೇಗೌಡ ಪೊಲೀಸ್ ಪಾಟೀಲ, ತಾ.ಪಂ. ಸದಸ್ಯರುಗಳಾದ ಶೇಖರಪ್ಪ ವಾರದ, ರೇಣುಕಾ ಬೆದವಟ್ಟಿ, ಗ್ರಾ.ಪಂ. ಅಧ್ಯಕ್ಷೆ ಯಲ್ಲಮ್ಮ ಗಾಣಿಗೇರ, ಉಪಾಧ್ಯಕ್ಷ ಕರಿಬಸಯ್ಯ ಬಿನ್ನಾಳ ಮುಂತಾದ ಗಣ್ಯರು ಭಾಗವಹಿಸುವರು.
Please follow and like us:
error