ಅರ್ಜುನ ಪ್ರಶಸ್ತಿ ಪಡೆದವರಿಂದ ಅರ್ಜಿ ಆಹ್ವಾನ

ಕೊಪ್ಪಳ ಜುಲೈ : ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯು ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೂ ಕ್ರೀಡಾ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿ, ಕೇಂದ್ರ ಸರ್ಕಾರ ನೀಡುವ ಅತ್ಯುನ್ನತ ಅರ್ಜುನ ಪ್ರಶಸ್ತಿ ಪಡೆದ ಜಿಲ್ಲೆಯ ಸ್ಥಳೀಯ ಸಾಧಕರಿಂದ ಕ್ರೀಡಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
ಕೇಂದ್ರ ಸರ್ಕಾರದ ಪಂಚಾಯತ್ ಯುವ ಕ್ರೀಡಾ ಔರ್ ಖೇಲ್ ಅಭಿಯಾನ್ (ಪೈಕ) ಅಡಿಯಲ್ಲಿ ನಿರ್ಮಿಸಿರುವ ಗ್ರಾಮೀಣ ಪ್ರದೇಶದ ಕ್ರೀಡಾ ಕೇಂದ್ರಗಳ ಕ್ರೀಡಾ ಪಟುಗಳಿಗೆ ತರಬೇತಿ ನೀಡಲು ಹಾಗೂ ಈ ಕೇಂದ್ರದ ಮೇಲುಸ್ತುವಾರಿ ಕಾರ್ಯ ನಿರ್ವಹಿಸಲು ಅರ್ಜುನ ಪ್ರಶಸ್ತಿ ಪಡೆದವರಿಂದ ಹಾಗೂ ಹಿರಿಯ ರಾಷ್ಟ್ರಮಟ್ಟದಲ್ಲಿ ಪದಕ ಪಡೆದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯಿಂದ ಈ ಪ್ರಶಸ್ತಿ ಪಡೆದವರಿದ್ದಲ್ಲಿ ತಮ್ಮ ಸಂಪೂರ್ಣ ವಿವರವನ್ನು ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಇವರಿಗೆ ಜುಲೈ ೨೭ ರ ಒಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Please follow and like us:
error