ಡಾ. ಅಬ್ದುಲ್ ಕಲಾಂ ನಿಧನ ಸಚಿವ ಶಿವರಾಜ ತಂಗಡಗಿ ಸಂತಾಪ.

ಕೊಪ್ಪಳ, ಜು.೨೯ ಭಾರತ ರತ್ನ, ಮಾಜಿ ರಾಷ್ಟ್ರಪತಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ಅವರ ನಿಧನಕ್ಕೆ   ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
      ಡಾ. ಅಬ್ದುಲ್ ಕಲಾಂ ಅವರು ರಾಮೇಶ್ವರದ ಬಡ ಬೆಸ್ತ ಕುಟುಂಬದಲ್ಲಿ ಜನಿಸಿದರೂ, ಪ್ರಾಮಾಣಿಕತೆ ಹಾಗೂ ಕಾಯಕ ಯೋಗದಿಂದ ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿ ಹುದ್ದೆಗೆ ಗೌರವ ತಂದವರು.  ಕೊನೆಯ ಉಸಿರು ಇರುವವರೆಗೂ ಮಕ್ಕಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಉಪನ್ಯಾಸ ನೀಡುವ ಮೂಲಕ ವ್ಯಕ್ತಿತ್ವದಿಂದ ದೊಡ್ಡತನ ಮೆರೆದರು.  ಡಾ. ಕಲಾಂ ರವರು ಎಲ್ಲಾ ವರ್ಗದವರ ಪ್ರೀತಿಗೆ ಪಾತ್ರರಾಗಿ ದೇಶಪ್ರೇಮಿ ಹಾಗೂ ಶಿಕ್ಷಣ ಪ್ರೇಮಿಯಾಗಿದ್ದರು.  ಇವರ ನಿಧನದಿಂದ ಶಿಕ್ಷಣ ಕ್ಷೇತ್ರ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

Leave a Comment