ಅ. ೦೨ ರಂದು ಕೊಪ್ಪಳದಲ್ಲಿ ಗಾಂಧೀಜಿ ಜಯಂತಿ ಕಾರ್ಯಕ್ರಮ.

ಕೊಪ್ಪಳ ಸೆ. ೩೦ (ಕ ವಾ) ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಮಹಾತ್ಮ ಗಾಂಧೀಜಿ ಜಯಂತಿ ಕಾರ್ಯಕ್ರಮ ಅ. ೦೨ ರಂದು ಬೆಳಿಗ್ಗೆ ೧೦ ಗಂಟೆಗೆ ಆಡಿಟೋರಿಯಂ ಹಾಲ್‌ನಲ್ಲಿ ನಡೆಯಲಿದೆ.
     ಗಾಂಧೀಜಿ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೧೦ ಗಂಟೆಗೆ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ನೆರವೇರಿಸುವುದರ ಜೊತೆಗೆ ‘ರಘುಪತಿ ರಾಘವ ರಾಜಾ ರಾಮ್’ ಗೀತ ಗಾಯನ ನಡೆಯಲಿದೆ.  ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಹಾತ್ಮಾ ಗಾಂಧೀಜಿಯವರ ಕುರಿತು ಕಿರು ಚಿತ್ರ ಪ್ರದರ್ಶನ ಹಾಗೂ ‘ಕರ್ನಾಟಕದಲ್ಲಿ ಗಾಂಧೀಜಿಯವರ ಹೆಜ್ಜೆಗಳು’ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದೆ.  ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ತಪ್ಪದೆ ಹಾಜರಾಗಬೇಕು ಎಂದು ಪ್ರಭಾರಿ ಜಿಲ್ಲಾಧಿಕಾರಿ ಡಾ : ಪ್ರವೀಣ್‌ಕುಮಾರ್ ಜಿ.ಎಲ್. ಅವರು ಕೋರಿದ್ದಾರೆ.

Please follow and like us:
error

Related posts

Leave a Comment