ಡಂಬ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಸಂಗಣ್ಣ ಕರಡಿ ಅವರಿಂದ ಚಾಲನೆ

ಕೊಪ್ಪಳ ನ.  : ಕೊಪ್ಪಳ ತಾಲೂಕು ಡಂಬ್ರಳ್ಳಿ ಗ್ರಾಮದ ಹರಿಜನ ಕೇರಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಶಾಸಕ ಸಂಗಣ್ಣ ಕರಡಿ ಅವರು ಭೂಮಿ ಪೂಜೆ ನೆರವೇರಿಸುವುದರ ಮೂಲಕ ಭಾನುವಾರ ಚಾಲನೆ ನೀಡಿದರು.
  ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಭಿವೃದ್ಧಿ ಯೋಜನೆಯಡಿ ೧೦ ಲಕ್ಷ ರೂ. ವೆಚ್ಚದಲ್ಲಿ ಡಂಬ್ರಳ್ಳಿ ಗ್ರಾಮದ ಹರಿಜನ ಕೇರಿಯ ರಸ್ತೆಯನ್ನು ಸಿಮೆಂಟ್ ರಸ್ತೆಯನ್ನಾಗಿಸುವ ಕಾಮಗಾರಿಗೆ ಶಾಸಕ ಸಂಗಣ್ಣ ಕರಡಿ ಅವರು ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.  ಇದರಿಂದಾಗಿ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದ್ದು, ಕಾಮಗಾರಿಯ ಹೊಣೆಯನ್ನು ನಿರ್ಮಿತಿ ಕೇಂದ್ರದವರಿಗೆ ವಹಿಸಲಾಗಿದೆ.  ನಿಗದಿತ ಕಾಲಾವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಶಾಸಕ ಸಂಗಣ್ಣ ಕರಡಿ ಅವರು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರು. 
  ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯೆ ಭಾಗೀರಥಿ ಶಂಕರಗೌಡ ಪಾಟೀಲ, ತಾ.ಪಂ. ಸದಸ್ಯ ಮುದೇಗೌಡ ಬೆಳ್ಳೂರು, ಕೆ.ಎಂ.ಎಫ್. ನಿರ್ದೇಶಕ ನಾಗನಗೌಡ, ಗ್ರಾಮ ಪಂಚಾಯತಿ ಸದಸ್ಯರುಗಳಾದ ದೇವರಡ್ಡಿ ಮಾಟರ್, ಮಹದೇವಪ್ಪ ಹರಿಜನ, ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಾರಡ್ಡಿ, ಗಣ್ಯರಾದ ಪ್ರಸನ್ನ ಗಡಾದ, ರಾಮರಡ್ಡಿ ಕರಡ್ಡಿ ಮುಂತಾದವರು ಉಪಸ್ಥಿತರಿದ್ದರು.

Leave a Reply