ಅಂಗನವಾಡಿ ಕೇಂದ್ರಗಳ ದುರಸ್ತಿ ಹಣ ಎತ್ತುವಳಿ : ಸಿಡಿಪಿಓ ಅಮಾನತ್ತು

 ಜಿಲ್ಲೆಯ ಕುಷ್ಟಗಿ ತಾಲೂಕಿನ ಅಂಗನವಾಡಿ ಕೇಂದ್ರಗಳ ದುರಸ್ತಿ ಕಾಮಗಾರಿ ಪೂರ್ಣಗೊಳಿಸದೆ, ಹಣ ಎತ್ತುವಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾರಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಸುಲೋಚನಾ ಬನ್ಸೋಡೆ ಅವರನ್ನು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ.
೨೦೧೩-೧೪ನೇ ಸಾಲಿಗೆ ದುರಸ್ತಿಗೊಂಡ ಅಂಗನವಾಡಿ ಕಟ್ಟಡಗಳಿಗೆ ಬಿಡುಗಡೆಯಾದ ಅನುದಾನ ರೂ.೨೧. ೯೨ ಲಕ್ಷ ಕಾಮಗಾರಿ ಮುಗಿಸದೆ ಎತ್ತುವಳಿ ಮಾಡಿರುವುದರ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ವಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲಾ ಪಂಚಾಯತಿಗೆ ವರದಿಯನ್ನು ಸಲ್ಲಿಸಲಾಗಿತ್ತು.  ಇದೀಗ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸುಲೋಚನಾ ಬನ್ಸೋಡೆ ಅವರನ್ನು ಅಮಾನತುಗೊಳಿಸಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Leave a Reply