ಫೆ. ೧೭ ರಂದು ಕೊಪ್ಪಳಕ್ಕೆ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ

 

ರಾಜ್ಯ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಅವರು ಫೆ. ೧೭ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

  ಸಚಿವರು ಅಂದು ಬೆಳಿಗ್ಗೆ ಯಾದಗಿರಿಯಿಂದ ಹೊರಟು ೧೧ ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು.  ನಂತರ ಇತ್ತೀಚೆಗೆ ಕೊಪ್ಪಳ ನಗರದ ಕಿನ್ನಾಳ ರಸ್ತೆ ಎನ್‌ಜಿಓ ಕಾಲೋನಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಿರ್ಮಾಣಗೊಂಡ ಆರ್‌ಸಿಸಿ ಓವರ್‌ಹೆಡ್ ಟ್ಯಾಂಕ್ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು.  ಮಧ್ಯಾಹ್ನ ೧೨ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.  ಮಧ್ಯಾಹ್ನ ೩ ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು.  ಸಚಿವರು ಅದೇ ದಿನ ಸಂಜೆ ೪ ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.  
Please follow and like us:
error