You are here
Home > Koppal News > ಬಸಾಪಟ್ಟಣ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

ಬಸಾಪಟ್ಟಣ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

 ಗಂಗಾವತಿ ಡಿ೦೭: ತಾಲೂಕಿನ ಬಸಾಪಟ್ಟಣ ಗ್ರಾಮದ ಬಾಪು ಕಾಲೋನಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣಗೊಂಡಿರುವ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಇಂದು ಶಾಸಕರಾದ ಇಕ್ಬಾಲ್ ಅನ್ಸಾರಿಯವರು ಉದ್ಘಾಟಿಸಿದರು.
ಚಾಲನೆ ನೀಡಿ ಮಾತನಾಡಿದ ಶಾಸಕರು, ಹೆಚ್.ಕೆ.ಪಾಟೀಲ್ ಶುದ್ಧ ಕುಡಿಯುವ ನೀರಿನ ಘಟಕವನ್ನು ಜಿಲ್ಲಾ ಪಂಚಾಯತಿಯ
ಸುಮಾರು ೧೨ ಲಕ್ಷ ರೂಗಳ ಅನುದಾನದಲ್ಲಿ ಬಸಾಪಟ್ಟಣ ಗ್ರಾಮದಲ್ಲಿ ಘಟಕವನ್ನು ಸ್ಥಾಪಿಸಲಾಗಿದೆ.  ಗ್ರಾಮದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಉದ್ಘಾಟನೆಯಲ್ಲಿ ಜಿಲ್ಲಾ ಪಂಚಾಯತಿಯ ಅಧ್ಯಕ್ಷ ಅಮರೇಶ ಕುಲಗಿ, ಜಿಲ್ಲಾ ಪಂಚಾಯತಿಯ ಸದಸ್ಯೆ ಶ್ರೀಮತಿ ವಿಜಯಲಕ್ಷ್ಮಿ ರಾಮಕೃಷ್ಣ, ತಾ.ಪಂ. ಸದಸ್ಯ ಶರಣೆಗೌಡ ಮಾಲೀಪಾಟೀಲ್, ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎನ್. ಮಠ್, ನಗರಸಭೆ ಅಧ್ಯಕ್ಷ ಶಾಮೀದ್ ಮನಿಯಾರ್,ಬಸಾಪಟ್ಟಣ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಸೂರ್ಯಕುಮಾರಿ ನಾಗೇಶ್ವರಾವ್ ಮತ್ತು ಗ್ರಾ.ಪಂ. ಸರ್ವ ಸದಸ್ಯರು ಭಾಗವಹಿಸಿದ್ದರು
.

Leave a Reply

Top