ಫೆ.೨೧ ರಂದು ಕವಿಗೋಷ್ಠಿ

ಕೊಪ್ಪಳ,ಫೆ.೨೦ ನಗರದ ಕಲ್ಯಾಣ ನಗರದಲ್ಲಿ ಕನ್ನಡ ಸಿರಿ ನಿವಾಸದಲ್ಲಿ ಫೆ.೨೧ ರಂದು ಕವಿಗೋಷ್ಠಿ ನಡೆಯಲಿದೆ ಎಂದು ಡಾ.ವಿ.ಬಿ.ರಡ್ಡೇರ್ ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ಮಹಾಂತೇಶ ಮಲ್ಲನಗೌಡರ ವಹಿಸಲಿದ್ದು ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ. ಕೆ.ರವಿಂದ್ರನಾಥ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹೆಚ್.ಎಸ್. ಪಾಟೀಲ್, ಹಿರಿಯ ಸಾಹಿತಿಗಳಾದ ವಿಠ್ಠಪ್ಪ  ಗೋರಂಟ್ಲಿ, ಅಲ್ಲಮಪ್ರಭು ಬೆಟ್ಟದೂರು, ರಾಜ್ಯ ಸಹಕಾರ ಮಹಾಮಂಡಳಿಯ ಅಧ್ಯಕ್ಷರಾದ ಶೇಖರಗೌಡ ಮಾಲಿ ಪಾಟೀಲ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕ ಕೋಟ್ರಪ್ಪ ಚೋರನೂರು, ಸಾಹಿತ್ಯ ಅಕಾಡಮಿ ಪುರಸ್ಕೃತ ಸಾಹಿತಿ ಎ.ಎಂ. ಮದರಿ, ಹಿರಿಯ ಸಾಹಿತಿ ಡಾ.ಕೆ.ಬಿ.ಬ್ಯಾಳಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎಸ್.ಪಾಟೀಲ್, ಪತ್ರಕರ್ತ ಸೋಮರಡ್ಡಿ ಅಳವಂಡಿ, ಕನ್ನಡ ನುಡಿ ಸೇವಕ ರಾಜಶೇಖರ ಅಂಗಡಿ, ಪತ್ರಕರ್ತ ಜಿ.ಎಸ್.ಗೋನಾಳ ಭಾಗವಹಿಸಲಿದ್ದಾರೆ. ಕವಿಗೋಷ್ಠಿಯಲ್ಲಿ ಕೊಪ್ಪಳ ಜಿಲ್ಲೆಯ ಪ್ರಮುಖ ಕವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸಲಿದ್ದಾರ್ರೆ. ಅಲ್ಲದೇ ಖ್ಯಾತ ಸಂಗೀತಗಾರರಾದ ಸದಾಶಿವ ಪಾಟೀಲ್ ಹಾಗೂ ಸಂಗಡಿಗರಿಂದ ಸುಗಮಸಂಗೀತ ಕಾರ್ಯಕ್ರಮ ನೆರವೇರಲಿದೆ ಎಂದು ಅವರು ತಿಳಿಸಿದ್ದಾರೆ.
Please follow and like us:
error