ಕೊಪ್ಪಳ ಜೂ. ೨೩ (ಕ.ವಾ): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆ ಇವರ ಸಹಕಾರದೊಂದಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಜೂ. ೨೪ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ಗಂಗಾವತಿಯ ಹೆಚ್. ಆರ್.ಎಸ್.ಎಮ್. ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ನೆರವೇರಿಸುವರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಎ. ಆನಂದ್, ಹೆಚ್.ಆರ್.ಎಸ್.ಎಮ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಸಿ. ಐಗೋಳ ಹಾಗೂ ಅವೇಕ್ ಸಂಸ್ಥೆಯ ಕಾರ್ಯದರ್ಶಿ ಜ್ಯೋತಿ ಬಾಲಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Please follow and like us: