You are here
Home > Koppal News > ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ-ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ

ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ-ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ

ಕೊಪ್ಪಳ. ಕ್ಷೇತ್ರದ ಮತದಾರರ ಪ್ರಭುಗಳು ತಮ್ಮನ್ನು ಶಾಸಕರನ್ನಾಗಿ ಆಯ್ಕೆ ಮಾಡಿದಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದರು.
ಅವರು ಇತ್ತೀಚೆಗೆ ತಾಲೂಕಿನ ಕವಲೂರ ಗ್ರಾಮದ ವಾಲ್ಮೀಕಿ ಕಾಲೋನಿಯಲ್ಲಿ ಮತಯಾಚಿಸಿದ ನಂತರ ನಡೆದ ವಿವಿಧ ಪಕ್ಷಗಳ ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಆಡಳಿತ ನಡೆಸಿದ ಭ್ರಷ್ಠ ಬಿಜೆಪಿ ಸರಕಾರದಿಂದ ಜನತೆ ಬೇಸತ್ತಿದ್ದು, ಇದೀಗ ರಾಜ್ಯದ ಜನತೆ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರಲು ಮನಸ್ಸು ಮಾಡಿದ್ದಾರೆ. ಸುಮಾರು ೫೦-೬೦ವರ್ಷಗಳ ಈ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷದಿಂದ ಮಾತ್ರ ನಾಡಿನ ಜನತೆ ನೆಮ್ಮದಿಯಿಂದ ಇರಲು ಸಾಧ್ಯ. ಕಾಂಗ್ರೆಸ್ ಸಾಮಾಜಿಕ ಕಳಕಳಿ ಹಾಗೂ ಸಾಮಾಜಿಕ ಬದ್ಧತೆಯನ್ನು ಹೊಂದಿರುವ ಏಕೈಕ ಪಕ್ಷವಾಗಿದೆ ಎಂದರು.
ಅವರು ಮುಂದುವರೆದು ಮಾತನಾಡಿ, ಕೊಪ್ಪಳ ವಿಧಾನಸಭಾ ಕ್ಷೇತ್ರ ಎಲ್ಲ ರಂಗಗಳಲ್ಲೂ ತೀರಾ ಹಿಂದುಳಿದ ಪ್ರದೇಶವಾಗಿದ್ದು, ಈ ಭಾರಿಯ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ತಮ್ಮನ್ನು ಶಾಸಕರನ್ನಾಗಿ ಚುನಾಯಿಸಿ ಕಳಿಸಿದಲ್ಲಿ ಕೊಪ್ಪಳ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ತತ್ವ ಸಿದ್ದಾಂತ ಮೆಚ್ಚಿ ಕವಲೂರ ಗ್ರಾಮದ ವಿವಿಧ ಪಕ್ಷಗಳ ಕಾರ್ಯಕರ್ತರು ಹಾಗೂ ಮುಖಂಡರುಗಳು ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಕೊಪ್ಪಳ ನಗರಸಭೆಯ ನೂತನ ಸದಸ್ಯರಾದ ಅಮ್ಜದ್ ಪಟೇಲ್, ಮುತ್ತು ಕುಷ್ಟಗಿ, ಬಾಳಪ್ಪ ಬಾರಕೇರ, ನಗರಸಭೆ ಮಾಜಿ ಅಧ್ಯಕ್ಷ ಸುರೇಶ ದೇಸಾಯಿ, ಮುಖಂಡರಾದ ಗೂಳಪ್ಪ ಹಲಿಗೇರಿ, ಕಾಟನ್ ಪಾಷಾ ಹಾಗೂ ಕವಲೂರ ಗ್ರಾಮದ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 
 ಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ವಾಲ್ಮೀಕಿ ಕಾಲೋನಿಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿರುವುದು. 

Leave a Reply

Top